ADVERTISEMENT

ರಾಯಚೂರು: ಚಾಲಕರ ಮಕ್ಕಳಿಗೆ ಶೈಕ್ಷಣಿಕ ಸಾಲಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2022, 14:39 IST
Last Updated 23 ಸೆಪ್ಟೆಂಬರ್ 2022, 14:39 IST
ರಾಯಚೂರಿನ  ಜಿಲ್ಲಾಧಿಕಾರಿ ಕಚೇರಿ ಮುಂದೆ ಕರ್ನಾಟಕ ಚಾಲಕರ ಒಕ್ಕೂಟ ಜಿಲ್ಲಾ ಘಟಕದ ಪದಾಧಿಕಾರಿಗಳು ಶುಕ್ರವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ರಾಯಚೂರಿನ  ಜಿಲ್ಲಾಧಿಕಾರಿ ಕಚೇರಿ ಮುಂದೆ ಕರ್ನಾಟಕ ಚಾಲಕರ ಒಕ್ಕೂಟ ಜಿಲ್ಲಾ ಘಟಕದ ಪದಾಧಿಕಾರಿಗಳು ಶುಕ್ರವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.   

ರಾಯಚೂರು: ಚಾಲಕರ ಮಕ್ಕಳಿಗೆ ಉನ್ನತ ಶಿಕ್ಷಣಕ್ಕಾಗಿ ಶೈಕ್ಷಣಿಕ ಸಾಲ ಹಾಗೂ ವಿದ್ಯಾರ್ಥಿವೇತನ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ಚಾಲಕರ ಒಕ್ಕೂಟ ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಶುಕ್ರವಾರ ಮನವಿ ಸಲ್ಲಿಸಿದರು.

ಚಾಲಕರ ಸಂಘಟನೆ ಅಸಂಘಟಿತವಾಗಿದ್ದು,ಸಂಘಟಿತ ವಲಯಕ್ಕೆ ಸೇರಿಸಬೇಕು. ಸರ್ಕಾರದಿಂದ ಕನಿಷ್ಠ ₹5 ಲಕ್ಷವರೆಗೆ ಉಚಿತ ಅಪಘಾತ ವಿಮಾ ಸೌಲಭ್ಯ ಒದಗಿಸಬೇಕು. ಚಾಲಕರ ಭಾರಿ ವಾಹನ ಚಾಲನಾ ಪರವಾನಗಿ ರಿನೆವಲ್ (ಪರಿಷ್ಕರಣೆ) ಆಯಾ ಜಿಲ್ಲಾ ಮಟ್ಟದಲ್ಲಿ ವ್ಯವಸ್ಥೆ ಮಾಡಬೇಕು. ಪ್ರತಿ ಜಿಲ್ಲಾ ತಾಲ್ಲೂಕು ಹಾಗೂ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರತ್ಯೇಕ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.

ಚಾಲಕರಿಗೆ ಪ್ರತ್ಯೇಕ ವಸತಿ ನಿಗಮ ಸ್ಥಾಪನೆ ಮಾಡಬೇಕು. ವಿಶ್ವ ಚಾಲಕರ ದಿನಾಚರಣೆಗೆ ನಿಗದಿತ ದಿನ ಗುರುತಿಸಬೇಕು. ಚಾಲಕರು ಮತ್ತು ಕುಟುಂಬಕ್ಕೆ ಉಚಿತ ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆ ಕೊಡಿಸಬೇಕು. ಪ್ರತ್ಯೇಕ ಚಾಲಕ ಕಲ್ಯಾಣ ಮಂಡಳಿ ಸ್ಥಾಪನೆ ಮಾಡಬೇಕು ಎಂದು ಮನವಿ ಮಾಡಿದರು.

ADVERTISEMENT

ಸಂಘದ ಜಿಲ್ಲಾಧ್ಯಕ್ಷ ಎಸ್.ರವೀಂದ್ರನಾಥ, ವೆಂಕಟೇಶ ಮಡಿವಾಳ, ಮಹಮ್ಮದ್ ರಫೆ, ಹೈದರ್ ಪಾಶಾ, ರಮೇಶ, ಮಲ್ಲಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.