ADVERTISEMENT

ರೋಗ ನಿರ್ಮೂಲನೆಗೆ ಜಾಗೃತಿ ಅವಶ್ಯಕ: ನ್ಯಾ.ಬೈಲೂರು ಶಂಕರರಾಮ

ವಿಶ್ವ ಏಡ್ಸ್‌ ದಿನಾಚರಣೆ‌

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2018, 13:40 IST
Last Updated 1 ಡಿಸೆಂಬರ್ 2018, 13:40 IST
ರಾಯಚೂರಿನಲ್ಲಿ ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಶನಿವಾರ ಆಯೋಜಿಸಿದ್ದ ಜಾಗೃತಿ ಜಾಥಾಕ್ಕೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಬೈಲೂರು ಶಂಕರರಾಮ ಚಾಲನೆ ನೀಡಿದರು
ರಾಯಚೂರಿನಲ್ಲಿ ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಶನಿವಾರ ಆಯೋಜಿಸಿದ್ದ ಜಾಗೃತಿ ಜಾಥಾಕ್ಕೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಬೈಲೂರು ಶಂಕರರಾಮ ಚಾಲನೆ ನೀಡಿದರು   

ರಾಯಚೂರು: ಏಡ್ಸ್‌ ರೋಗ ನಿರ್ಮೂಲನೆಗೆ ಜನರಲ್ಲಿ ಜಾಗೃತಿ ಮೂಡಿಸುವುದು ಅವಶ್ಯಕವಾಗಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಬೈಲೂರು ಶಂಕರರಾಮ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಪೋಲಿಸ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆ ಮತ್ತು ನಿಯಂತ್ರಣ ಘಟಕ ಹಾಗೂ ಇತರೆ ಸಂಘ ಸಂಸ್ಥೆಗಳಿಂದ ಶನಿವಾರ ಆಯೋಜಿಸಿದ್ದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.

ಹಲವು ವರ್ಷಗಳಿಂದ ಈ ರೋಗ ದೇಶದ ಜನರನ್ನು ಕಾಡುತ್ತಿದ್ದು, ಇದಕ್ಕೆ ಹಲವು ಕಾರಣಗಳಿವೆ. ಆದರೂ, 2011 ರಿಂದ ಕಡಿಮೆಯಾಗುತ್ತಾ ಬಂದಿದೆ. ಜಿಲ್ಲೆಯ ತಾಲ್ಲೂಕುಗಳ ಪೈಕಿ ರಾಯಚೂರು ತಾಲ್ಲೂಕಿನಲ್ಲಿ ಹೆಚ್ಚಿನ ಪ್ರಕರಣಗಳು ಕಂಡು ಬರುತ್ತಿವೆ ಎಂದರು.

ADVERTISEMENT

ಏಡ್ಸ್‌ ಪ್ರಕರಣಗಳು ಕಡಿಮೆ ಮಾಡಲು ಆರೋಗ್ಯ ಇಲಾಖೆ ಹಾಗೂ ಇತರೆ ಇಲಾಖೆಗಳು ಜನರಲ್ಲಿ ಜಾಗೃತಿ ಮೂಡಿಸಿ ಆರೋಗ್ಯವಂತ ಸಮಾಜ ನಿರ್ಮಿಸಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಬಿ.ಶರತ್ ಮಾತನಾಡಿ, ರಾಜ್ಯದಲ್ಲಿನ ಏಡ್ಸ್‌ ಪ್ರಕರಣಗಳಲ್ಲಿ ರಾಯಚೂರು ಜಿಲ್ಲೆ 4ನೇ ಸ್ಥಾನದಲ್ಲಿದ್ದು, ಏಡ್ಸ್‌ ನಿಯಂತ್ರಣಕ್ಕಾಗಿ ಪ್ರತಿಯೊಂದು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಸಮಾಜದಲ್ಲಿ ಏಡ್ಸ್‌ ರೋಗಿಗಳನ್ನು ಕೀಳಾಗಿ ಕಾಣಬಾರದು. ಇತರರನ್ನು ನೋಡುವಂತೆ ಏಡ್ಸ್‌ ರೋಗಿಗಳನ್ನು ನೋಡುವ ಮೂಲಕ ಅವರಿಗೂ ಸಮಾನವಾದ ಜೀವನ ದೊರಕಿಸಬೇಕು ಎಂದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಸಿ.ನಾಡಗೌಡ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಎಂ.ಕೆ.ಎಸ್.ನಸೀರ್, ಜಿಲ್ಲಾ ಕ್ಷಯ ಮತ್ತು ಏಡ್ಸ್ ನಿಯಂತ್ರಣಾಧಿಕಾರಿ ಡಾ.ಸುರೇಂದ್ರಬಾಬು, ಡಾ.ಕೆ.ಗಣೇಶ, ಡಾ.ವಿಜಯಾ ಇದ್ದರು. ಜಾಥದಲ್ಲಿ ಸಂಘ–ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.