ಕವಿತಾಳ: ‘ಆಶಾ ಕಾರ್ಯಕರ್ತೆಯರು ಜೂ.31 ರವರೆಗೆ ಮನೆ ಮನೆಗೆ ಭೇಟಿ ನೀಡಿ ಅತಿಸಾರ ಭೇದಿ ನಿಯಂತ್ರಣದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಿದ್ದಾರೆ’ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಾಲಪ್ಪ ನಾಯಕ ಹೇಳಿದರು.
ಸಮೀಪದ ಮಲ್ಲದಗುಡ್ಡ ಗ್ರಾಮದ ಆರೋಗ್ಯ ಮತ್ತು ಕ್ಷೇಮ ಮಂದಿರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಅತಿಸಾರ ಭೇದಿ ನಿಯಂತ್ರಣ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,‘ಮಳೆಗಾಲ ಆರಂಭವಾಗಿದ್ದು, ಕಲುಷಿತ ನೀರು ಸೇವನೆ ಮಾಡಬಾರದು. ಆಹಾರ ಸೇವಿಸುವ ಮೊದಲು ಕೈಗಳನ್ನು ಸಾಬೂನು ಬಳಸಿ ಸ್ವಚ್ಛಗೊಳಿಸಬೇಕು. ದೇಹದಲ್ಲಿ ನೀರಿನ ಅಂಶ ಕಡಿಮೆಯಾಗದಂತೆ ಅಧಿಕ ಪ್ರಮಾಣದ ನೀರು ಸೇವನೆ ಮಾಡಬೇಕು’ ಎಂದು ಸಲಹೆ ನೀಡಿದರು.
ಸಮುದಾಯ ಆರೋಗ್ಯ ಅಧಿಕಾರಿ ಹನುಮಂತಪ್ಪ ಮ್ಯಾಗಳಮನಿ, ಆರೋಗ್ಯ ಸುರಕ್ಷಾ ಅಧಿಕಾರಿ ಕೃಷ್ಣವೇಣಿ, ಆಶಾ ಕಾರ್ಯಕರ್ತೆಯರಾದ ಪಂಪಮ್ಮ, ಶ್ರೀದೇವಿ, ಅಂಗನವಾಡಿ ಕಾರ್ಯಕರ್ತೆ ಲಕ್ಷ್ಮೀದೇವಿ, ಮುಖಂಡರಾದ ಅಮರೇಶಪ್ಪ ಗೌಡ ನೆಲಹಾಳ, ಬಸನಗೌಡ, ಕರಿಬಸಯ್ಯಸ್ವಾಮಿ, ಪಂಪಯ್ಯ ಸ್ವಾಮಿ, ಶಿವಯ್ಯ ಸ್ವಾಮಿ, ಅಮರಯ್ಯ ಸ್ವಾಮಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ವಾಂತಿ ಭೇದಿ ಜ್ವರ ಉಸಿರಾಟದ ತೊಂದರೆ ಜಡತ್ವ ಹಾಗೂ ಪ್ರಜ್ಞೆ ತಪ್ಪುವುದು ಕಂಡು ಬಂದಲ್ಲಿ ತಕ್ಷಣ ಸಮೀಪದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕುಬಾಲಪ್ಪ ನಾಯಕ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.