ADVERTISEMENT

ರಾಯಚೂರು: ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಧ್ವಜಾರೋಹಣ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2022, 4:33 IST
Last Updated 15 ಆಗಸ್ಟ್ 2022, 4:33 IST
ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಬ.ಪಾಟೀಲ ಮುನೇನಕೊಪ್ಪ ಅವರು ಧ್ವಜಾರೋಹಣ ನೆರವೇರಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಬ.ಪಾಟೀಲ ಮುನೇನಕೊಪ್ಪ ಅವರು ಧ್ವಜಾರೋಹಣ ನೆರವೇರಿಸಿದರು.   

ರಾಯಚೂರು: 76ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಬ.ಪಾಟೀಲ ಮುನೇನಕೊಪ್ಪ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ಆನಂತರ ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವದ ಸಂದೇಶ ನೀಡಿದರು.

ಸಂಸದ ರಾಜಾ ಅಮರೇಶ್ವರ ನಾಯಕ, ಶಾಸಕ ಡಾ.ಶಿವರಾಜ ಪಾಟೀಲ, ನಗರಸಭೆ ಅಧ್ಯಕ್ಷೆ ಲಲಿತಾ ಕಡಗೋಲ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಿಮ್ಮಪ್ಪ ನಾಡಗೌಡ, ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ್ ನಾಯಕ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಕೀಲ್ ಬಿ., ಹೆಚ್ಚವರಿ ಜಿಲ್ಲಾಧಿಕಾರಿ ಡಾ.ಕೆ.ಆರ್.ದುರುಗೇಶ, ಸಹಾಯಕ ಆಯುಕ್ತರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.