ADVERTISEMENT

ಹೆಣ್ಣು ಮಗಳಿಗೆ ಅನ್ಯಾಯವಾಗಬಾರದು: ಸಚಿವ ಶ್ರೀರಾಮುಲು

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2021, 16:49 IST
Last Updated 30 ಮಾರ್ಚ್ 2021, 16:49 IST
ಪತ್ರಿಕಾಗೋಷ್ಠಿಯಲ್ಲಿ ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಮಾತನಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಮಾತನಾಡಿದರು.   

ರಾಯಚೂರು: ‘ಯಾವುದೇ ಹೆಣ್ಣುಮಕ್ಕಳಿಗೆ ಅನ್ಯಾಯ ಆಗಬಾರದು. ನಾವೆಲ್ಲ ಹೆಣ್ಣುಮಕ್ಕಳ ಪರವಾಗಿದ್ದೇವೆ. ಸಿ.ಡಿ.ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಯುತ್ತಿರುವುದರಿಂದ ಆ ಬಗ್ಗೆ ಏನೂ ಹೇಳುವುದು ತಪ್ಪಾಗುತ್ತದೆ’ ಎಂದು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದರು.

ಮಂಗಳವಾರ ಮಸ್ಕಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಪ್ರಕರಣದಲ್ಲಿ ಯಾರಿಗೂ ಅನ್ಯಾಯವಾಗಬಾರದು. ತನಿಖೆ ನಂತರ ತಪ್ಪು ಮಾಡಿದವರು ಶಿಕ್ಷೆ ಅನುಭವಿಸುತ್ತಾರೆ’ ಎಂದರು.

‘ಯಾವುದೇ ಹೆಣ್ಣುಮಕ್ಕಳಿಗೆ ಕಾನೂನಾತ್ಮಕವಾಗಿ ಸಿಗಬೇಕಾದ ರಕ್ಷಣೆಯನ್ನು ವಾಲ್ಮೀಕಿ ಸಮಾಜದಿಂದಲೂ ಒದಗಿಸಲಾಗುವುದು’ ಎಂದು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.