ADVERTISEMENT

ಮಸ್ಕಿ | ಒಳಮೀಸಲಾತಿ ಅನ್ಯಾಯ: ಪ್ರತಿಭಟನೆ ನಾಳೆ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2025, 2:29 IST
Last Updated 7 ಸೆಪ್ಟೆಂಬರ್ 2025, 2:29 IST
<div class="paragraphs"><p>&nbsp;ಪ್ರಾತಿನಿಧಿಕ ಚಿತ್ರ</p></div>

 ಪ್ರಾತಿನಿಧಿಕ ಚಿತ್ರ

   

ಮಸ್ಕಿ: ‘ಒಳಮೀಸಲಾತಿ ಅನ್ಯಾಯ ಖಂಡಿಸಿ ಸೆ. 8ರಂದು ಪಟ್ಟಣದಲ್ಲಿ ಬಂಜಾರ ಸಮಾಜದಿಂದ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ’ ಎಂದು ಆಲ್ ಇಂಡಿಯಾ ಬಂಜಾರ ಸೇವಾ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಅಮರೇಶ ನಾಯ್ಕ ಹೇಳಿದರು.

ಪಟ್ಟಣದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಬಲಗೈ, ಎಡಗೈ ಸಮುದಾಯಕ್ಕೆ ಹೆಚ್ಚಿನ ಮೀಸಲಾತಿ ನೀಡಿದ್ದು, ಉಳಿದ 59 ಜಾತಿಗಳಿಗೆ ಕಡಿಮೆ ಮೀಸಲಾತಿ ನೀಡಿದೆ. ಅದರಿಂದ ಸಮಾಜಕ್ಕೆ ಅನ್ಯಾಯವಾಗಿದೆ. ಮುಖ್ಯಮಂತ್ರಿಯವರು ಈ ಬಗ್ಗೆ ಪುನರ್ ಪರಿಶೀಲನೆ ನಡೆಸಬೇಕು ಎಂದು ಒತ್ತಾಯಿಸಿ ತಹಶೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು’ ಎಂದು ತಿಳಿಸಿದರು.

ADVERTISEMENT

‘ಸೆ. 8ರಂದು ಬೆಳಿಗ್ಗೆ ಪಟ್ಟಣದ ಸಂತ ಸೇವಾಲಾಲ ವೃತ್ತದಿಂದ ಮೆರವಣಿಗೆ ಆರಂಭಿಸಿ, ಪ್ರಮುಖ ಬೀದಿಗಳ ಮೂಲಕ ಸಾಗಿ ತಹಶೀಲ್ದಾರ್‌ ಮೂಲಕ ಸರ್ಕಾರಕ್ಕೆ‌ ಮನವಿ ಸಲ್ಲಿಸಲಾಗುವುದು. ಬಂಜಾರ, ‌ಭೋವಿ ಕೊರಮ್, ಕೊರಚ ಸಮಾಜದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು’ ಎಂದು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.