ಬಾನು ಮುಷ್ತಾಕ್, ಶಶಿಕಾಂತ ಶೆಂಬೆಳ್ಳಿ
ದೇವದುರ್ಗ: ಗಬ್ಬೂರಿನ ಮಹಾಶೈವ ಧರ್ಮ ಪೀಠದ 2025ನೇ ಸಾಲಿನ ಮಹಾತಪಸ್ವಿ ‘ಶ್ರೀ ಕುಮಾರಸ್ವಾಮಿ ಸಾಹಿತ್ಯ ರತ್ನ’ ಪ್ರಶಸ್ತಿಗೆ ಬಾನು ಮುಷ್ತಾಕ್ ಮತ್ತು ಬೀದರ್‌ನ ಪ್ರಜಾವಾಣಿ ವರದಿಗಾರ ಶಶಿಕಾಂತ ಶೆಂಬೆಳ್ಳಿ ಅವರನ್ನು ‘ಶ್ರೀಕುಮಾರಸ್ವಾಮಿ ಪತ್ರಿಕಾ ಭೂಷಣ’ ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ.
ಬಾನು ಮುಷ್ತಾಕ್ ಅವರು ಸಾಹಿತ್ಯ ಕ್ಷೇತ್ರದಲ್ಲಿ, ಶೆಂಬೆಳ್ಳಿ ಅವರು ಪತ್ರಿಕಾ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಅಧ್ಯಕ್ಷ ಮುಕ್ಕಣ್ಣ ಕರಿಗಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಮಾರಸ್ವಾಮಿ ಗುರುಗಳ ಜನ್ಮದಿನೋತ್ಸವ ಅಂಗವಾಗಿ ನೂಲಹುಣ್ಣಿಮೆಯ ದಿನದಂದು (ಆ.9) ಮಹಾಶೈವ ಧರ್ಮಪೀಠದ ವತಿಯಿಂದ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು.
ಮಹಾತಪಸ್ವಿ ಶ್ರೀ ಕುಮಾರಸ್ವಾಮಿ ಸಾಹಿತ್ಯ ರತ್ನ ಪ್ರಶಸ್ತಿ ₹1 ಲಕ್ಷ ನಗದು ಬಹುಮಾನ ಮತ್ತು ಶ್ರೀಕುಮಾರಸ್ವಾಮಿ ಪತ್ರಿಕಾ ಭೂಷಣ ಪ್ರಶಸ್ತಿ ₹51 ಸಾವಿರ ನಗದು ಬಹುಮಾನ ಮತ್ತು ಸ್ಮರಣ ಸಂಚಿಕೆ ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.