ಲಿಂಗಸುಗೂರು: ಬಸವಸಾಗರ ಜಲಾಶಯಕ್ಕೆ ಹರಿದು ಬರುತ್ತಿರುವ ಹಿನ್ನೀರಿನ ಪ್ರಮಾಣ ತಗ್ಗಿದ್ದು ಕೃಷ್ಣಾ ನದಿಗೆ ಶನಿವಾರ ಸಂಜೆ 46,256 ಕ್ಯೂಸೆಕ್ ನೀರು ಬಿಡಲಾಗಿದೆ.
ಕೃಷ್ಣಾ ಅಚ್ಚುಕಟ್ಟು ಪ್ರದೇಶ, ಮಹಾರಾಷ್ಟ್ರದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ಆಲಮಟ್ಟಿ ಜಲಾಶಯದಿಂದ 60 ಸಾವಿರ ಕ್ಯೂಸೆಕ್ ನೀರು ಹರಿಸಲಾಗುತ್ತಿದೆ. ಬಸವಸಾಗರದಲ್ಲಿ ಗರಿಷ್ಠ ಪ್ರಮಾಣದ ನೀರನ್ನು ಕಾಯ್ದಿರಿಸಿಕೊಂಡು 13 ಕ್ರಸ್ಟ್‌ಗೇಟ್‌ಗಳ ಮೂಲಕ ನದಿಗೆ 40,256 ಕ್ಯೂಸೆಕ್, ಮುರುಡೇಶ್ವರ ಪವರ್ ಪ್ರಾಜೆಕ್ಟ್‌ಗೆ 6 ಸಾವಿರ ಸೇರಿ ಒಟ್ಟು 46,256 ಕ್ಯೂಸೆಕ್ ನೀರು ಬಿಡಲಾಗಿದೆ.
33.313 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯವಿರುವ ಜಲಾಶಯದಲ್ಲಿ ಶನಿವಾರ ಸಂಜೆ 27.015 ಟಿಎಂಸಿ ನೀರು ಸಂಗ್ರಹವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.