ADVERTISEMENT

ಸಿಂಧನೂರು | ಬಾಲಿಕಾ ವಸತಿ ನಿಲಯಕ್ಕೆ ಬಿಇಒ ಭೇಟಿ; ವಿದ್ಯಾರ್ಥಿಗಳೊಂದಿಗೆ ಚರ್ಚೆ

ರಾಗಲಪರ್ವಿ ಕಸ್ತೂರಬಾ ಗಾಂಧಿ ಬಾಲಿಕಾ ವಸತಿ ನಿಲಯಕ್ಕೆ ಬಿಇಒ ಭೇಟಿ

​ಪ್ರಜಾವಾಣಿ ವಾರ್ತೆ
Published 24 ಜುಲೈ 2025, 6:14 IST
Last Updated 24 ಜುಲೈ 2025, 6:14 IST
<div class="paragraphs"><p>ಸಿಂಧನೂರು ತಾಲ್ಲೂಕಿನ ರಾಗಲಪರ್ವಿ ಕಸ್ತೂರಬಾ ಗಾಂಧಿ ಬಾಲಿಕಾ ವಸತಿ ನಿಲಯಕ್ಕೆ ಬಿಇಒ ಬಸವಲಿಂಗಪ್ಪ ಹುಡೇದ್ ಬುಧವಾರ ಭೇಟಿ ನೀಡಿ ವಿದ್ಯಾರ್ಥಿನಿಯರೊಂದಿಗೆ ಚರ್ಚೆ ನಡೆಸಿ ವಿವಿಧ ಸಮಸ್ಯೆಗಳನ್ನು ಆಲಿಸಿದರು</p></div>

ಸಿಂಧನೂರು ತಾಲ್ಲೂಕಿನ ರಾಗಲಪರ್ವಿ ಕಸ್ತೂರಬಾ ಗಾಂಧಿ ಬಾಲಿಕಾ ವಸತಿ ನಿಲಯಕ್ಕೆ ಬಿಇಒ ಬಸವಲಿಂಗಪ್ಪ ಹುಡೇದ್ ಬುಧವಾರ ಭೇಟಿ ನೀಡಿ ವಿದ್ಯಾರ್ಥಿನಿಯರೊಂದಿಗೆ ಚರ್ಚೆ ನಡೆಸಿ ವಿವಿಧ ಸಮಸ್ಯೆಗಳನ್ನು ಆಲಿಸಿದರು

   

ಸಿಂಧನೂರು: ತಾಲ್ಲೂಕಿನ ರಾಗಲಪರ್ವಿ ಗ್ರಾಮದಲ್ಲಿರುವ ಕರ್ನಾಟಕ ಕಸ್ತೂರಬಾ ಗಾಂಧಿ ಬಾಲಿಕಾ ವಸತಿ ನಿಲಯಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಬಸವಲಿಂಗಪ್ಪ ಹುಡೇದ್ ಬುಧವಾರ ಭೇಟಿ ನೀಡಿ ವಿದ್ಯಾರ್ಥಿನಿಯರೊಂದಿಗೆ ಚರ್ಚೆ ನಡೆಸಿ ವಿವಿಧ ಸಮಸ್ಯೆಗಳನ್ನು ಆಲಿಸಿದರು.

ಈ ವೇಳೆ ಕರ್ನಾಟಕ ರಕ್ಷಣಾ ವೇದಿಕೆ (ಸ್ವಾಭಿಮಾನ ಬಣ) ತಾಲ್ಲೂಕು ಘಟಕದ ಅಧ್ಯಕ್ಷ ಮಂಜುನಾಥ ಗಾಣಗೇರಾ ಅವರು ‘ಶಾಲೆಯ ಕಂಪೌಂಡ್‍ಗೆ ಗೇಟ್ ಅಳವಡಿಸದ ಕಾರಣ ಸಂಜೆಯಾಗುತ್ತಿದ್ದಂತೆ ಕುಡುಕರ ಹಾವಳಿ ಹೆಚ್ಚಾಗಿದ್ದು, ವಿದ್ಯಾರ್ಥಿನಿಯರಲ್ಲಿ ಆತಂಕ ಹೆಚ್ಚಾಗಿದೆ. ಹೀಗಾಗಿ ತಕ್ಷಣವೇ ತಡೆಗೋಡೆ ಮತ್ತು ಕಂಪೌಂಡ್‍ಗೆ ಗೇಟ್ ಅಳವಡಿಸಬೇಕು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಗಮನ ಸೆಳೆದರು.

ADVERTISEMENT

ಕ್ಷೇತ್ರ ಶಿಕ್ಷಣಾಧಿಕಾರಿ ಬಸವಲಿಂಗಪ್ಪ ಹುಡೇದ್ ಮಾತನಾಡಿ,‘ ಈ ಕುರಿತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳ ಗಮನಕ್ಕೆ ತಂದು ಆದಷ್ಟು ಶೀಘ್ರ ಕೆಲಸ ಮಾಡಿಸಲಾಗುವುದು’ ಎಂದು ಭರವಸೆ ನೀಡಿದರು.

ವಿದ್ಯಾರ್ಥಿನಿಯರಿಗೆ ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ವಸತಿ ನಿಲಯದಲ್ಲಿ ಅಗತ್ಯ ಸೌಕರ್ಯಗಳನ್ನು ಕಲ್ಪಿಸಬೇಕು. ಮೆನು ಪ್ರಕಾರ ಉಪಾಹಾರ, ಊಟ ನೀಡಬೇಕು. ಶುದ್ಧ ಕುಡಿಯುವ ನೀರು ಪೂರೈಸಬೇಕು ಎಂದು ಬಿಇಒ ಬಸವಲಿಂಗಪ್ಪ ಅವರು ಮುಖ್ಯಶಿಕ್ಷಕಿ ಸುವರ್ಣಗೆ ಸೂಚಿಸಿದರು.

ಎಸ್‍ಡಿಎಂಸಿ ಅಧ್ಯಕ್ಷ ಹುಸೇನಪ್ಪ ದಾರಿಮನಿ, ವೇದಿಕೆಯ ಪ್ರಧಾನ ಕಾರ್ಯದರ್ಶಿ ಅಯ್ಯಪ್ಪ ಮೇಟಿ, ರುದ್ರಗೌಡ, ಮುಖಂಡ ಪರಶುರಾಮ್ ಗೀತಾಕ್ಯಾಂಪ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.