
ಕವಿತಾಳ: ‘ಕನ್ನಡ ಭಾಷೆ, ನೆಲ, ಜಲದ ವಿಷಯದಲ್ಲಿ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು’ ಎಂದು ಕಲ್ಮಠದ ಅಭಿನವ ಸಿದ್ದಲಿಂಗ ಸ್ವಾಮೀಜಿ ಹೇಳಿದರು.
ಪಟ್ಟಣದಲ್ಲಿ ಕನ್ನಡ ಅಭಿಮಾನಿ ಬಳಗದ ವತಿಯಿಂದ ಶನಿವಾರ ಏರ್ಪಡಿಸಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭುವನೇಶ್ವರಿ ಮೂರ್ತಿ ಮೆರವಣಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು.
‘ಪ್ರತಿ ವರ್ಷ ಅದ್ದೂರಿಯಾಗಿ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಕನ್ನಡದ ಬಗ್ಗೆ ಜಾಗೃತಿ ಮೂಡಿಸಲು ಪ್ರಯತ್ನಿಸುತ್ತಿರುವ ಕನ್ನಡ ಅಭಿಮಾನಿ ಬಳಗದ ಕಾರ್ಯ ಶ್ಲಾಘನೀಯ’ ಎಂದರು.
ಸರ್ಕಾರಿ ಪ್ರೌಢಶಾಲೆಯಿಂದ ಪ್ರಮುಖ ರಸ್ತೆಗಳಲ್ಲಿ ಭುವನೇಶ್ವರಿ ಮೂರ್ತಿಯನ್ನು ಮೆರವಣಿಗೆ ಮಾಡಲಾಯಿತು.
ಮುಖಂಡರಾದ ಕಿರಲಿಂಗಪ್ಪ, ಯಮನಪ್ಪ ದಿನ್ನಿ, ಬಲವಂತರಾಯ ವಟಗಲ್, ಶಿವಣ್ಣ ವಕೀಲ, ಮಾಳಪ್ಪ ತೋಳ, ಚಾಂದಪಾಶಾ, ಸುರೇಶ ರಡ್ಡಿ, ಮಲ್ಲಿಕಾರ್ಜುನ ಗೌಡ, ಅಮರೇಶ ಕಟ್ಟಿಮನಿ, ರುಕ್ಮುದ್ದೀನ್, ಮೌನೇಶ ನಾಯಕ ಮತ್ತಿತರರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.