ಹಟ್ಟಿ ಚಿನ್ನದ ಗಣಿ: ಹಟ್ಟಿ ಪಟ್ಟಣದ ಸಮೀಪದ ಮೇದಿನಾಪುರ ರಸ್ತೆಯಲ್ಲಿ ಬುಧವಾರ ರಾತ್ರಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ.
ಲಿಂಗಸುಗೂರಿನಲ್ಲಿ ನರ್ಸಿಂಗ್ ಅಭ್ಯಾಸ ಮಾಡುತ್ತಿದ್ದ ಮಹಾದೇವ ದೇವೇಂದ್ರಪ್ಪ (20) ಮೃತ ಯುವಕ.
ಹಿಂಬದಿ ಸಾವರ ರವಿಯ ಕೈ, ಕಾಲು ಮುರಿದಿದ್ದು ಸ್ಧಳೀಯ ಹಟ್ಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಈ ಕುರಿತು ಹಟ್ಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.