ADVERTISEMENT

Maski | ರಸ್ತೆ ಅಪಘಾತ: ಬೈಕ್ ಹಿಂಬದಿ ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2022, 5:39 IST
Last Updated 24 ಡಿಸೆಂಬರ್ 2022, 5:39 IST
ಶಿವಗ್ಯಾನಪ್ಪ ತಳವಾರ
ಶಿವಗ್ಯಾನಪ್ಪ ತಳವಾರ   

ಮಸ್ಕಿ (ರಾಯಚೂರು ಜಿಲ್ಲೆ): ಬೈಕ್ ಹಿಂಬದಿ ಸವಾರ ಆಯತಪ್ಪಿ ಬಿದ್ದಾಗ ಲಾರಿ ಹರಿದು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬೇಡರ ಕಾರಲಕುಂಟಿ ಗ್ರಾಮದ ಬಳಿ ಶನಿವಾರ ನಡೆದಿದೆ.

ಲಿಂಗಸುಗೂರು ತಾಲ್ಲೂಕಿನ ಯರಗಂಟಿ ಗ್ರಾಮದ ಶಿವಗ್ಯಾನಪ್ಪ ತಳವಾರ (38) ಮೃತರು. ಬೈಕ್ ಸವಾರನಿಗೆ ಯಾವುದೇ ಗಾಯಗಳಾಗಿಲ್ಲ.

ಮಸ್ಕಿಯಿಂದ ಲಿಂಗಸುಗೂರಿಗೆ ಬೈಕ್ ಮೇಲೆ ತೆರಳುವಾಗ ಈ ಅಪಘಾತ ನಡೆದಿದೆ. ಪೋಲಿಸರು ಲಾರಿ ಶೋಧ ಆರಂಭಿಸಿದ್ದಾರೆ.
ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐಪಿಎಸ್ ಸಿದ್ದರಾಮ ಬಿದರಾಣಿ ಭೇಟಿ ನೀಡಿದ್ದು, ತನಿಖೆ ಆರಂಭಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.