ADVERTISEMENT

ಮಾನ್ವಿ: ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ಧರ್ಮಸ್ಥಳದ ಬಗ್ಗೆ ಅಪಪ್ರಚಾರಕ್ಕೆ ಖಂಡನೆ

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2025, 4:54 IST
Last Updated 27 ಆಗಸ್ಟ್ 2025, 4:54 IST
ಮಾನ್ವಿಯಲ್ಲಿ ಬಿಜೆಪಿ ಕಾರ್ಯಕರ್ತರು ಗ್ರೇಡ್-2 ತಹಶೀಲ್ದಾರ್ ಅಬ್ದುಲ್ ವಾಹಿದ್ ಅವರಿಗೆ ಮನವಿ ಸಲ್ಲಿಸಿದರು
ಮಾನ್ವಿಯಲ್ಲಿ ಬಿಜೆಪಿ ಕಾರ್ಯಕರ್ತರು ಗ್ರೇಡ್-2 ತಹಶೀಲ್ದಾರ್ ಅಬ್ದುಲ್ ವಾಹಿದ್ ಅವರಿಗೆ ಮನವಿ ಸಲ್ಲಿಸಿದರು   

ಮಾನ್ವಿ: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಪಟ್ಟಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಪಟ್ಟಣದ ಬಸವ ವೃತ್ತದಿಂದ ತಹಶೀಲ್ದಾರ್ ಕಚೇರಿವರೆಗೆ ಮೆರವಣಿಗೆಯಲ್ಲಿ ತೆರಳಿದ ಪ್ರತಿಭಟನಾಕಾರರು ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿ ಘೋಷಣೆಗಳನ್ನು ಕೂಗಿದರು.

‘ಹಿಂದೂಗಳ ಶ್ರದ್ಧೆ ಹಾಗೂ ಭಕ್ತಿಯ ಕೇಂದ್ರವಾಗಿರುವ ಧರ್ಮಸ್ಥಳದ ಬಗ್ಗೆ ಕೆಲವರು ದುರು ದ್ದೇಶದಿಂದ ಸುಳ್ಳ ಸಂಗತಿಗಳ ಮೂಲಕ ಅಪಪ್ರಚಾರ ಮಾಡುತ್ತಿದ್ದಾರೆ’ ಎಂದು ದೂರಿದರು.

ADVERTISEMENT

ರಾಜ್ಯ ಸರ್ಕಾರ ಧರ್ಮಸ್ಥಳದ ಬಗ್ಗೆ ದೂರು ನೀಡಿದ್ದ ವ್ಯಕ್ತಿಯ ಹಿಂದಿರುವ ದುಷ್ಟ ಶಕ್ತಿಗಳನ್ನು ಪತ್ತೆ ಹಚ್ಚಿ ಅಗತ್ಯ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಗ್ರೇಡ್-2 ತಹಶೀಲ್ದಾರ್ ಅಬ್ದುಲ್ ವಾಹಿದ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಬಿಜೆಪಿ ಮಂಡಲ ಅಧ್ಯಕ್ಷ ವೀರಭದ್ರಗೌಡ ಭೋಗಾವತಿ ಮತ್ತು ಪದಾಧಿಕಾರಿಗಳು, ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.