ADVERTISEMENT

ರಾಯಚೂರು | ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಆರೋಪ: ಬಿಜೆಪಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 11 ಜನವರಿ 2026, 6:37 IST
Last Updated 11 ಜನವರಿ 2026, 6:37 IST
ರಾಯಚೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು
ರಾಯಚೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು   

ರಾಯಚೂರು: ಹುಬ್ಬಳ್ಳಿಯಲ್ಲಿ ಮಹಿಳೆಯನ್ನು ಪೊಲೀಸರು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ನಗರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ಪಕ್ಷದ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವ ಘಟನೆ ನಾಗರಿಕ ಸಮಾಜ ತಲೆ ತಗ್ಗಿಸುವಂತದ್ದು, ಮಹಿಳೆಯರಿಗೆ ಪವಿತ್ರ ಸ್ಥಾನ ನೀಡುವ ಈ ಸಮಾಜದಲ್ಲಿ ರಾಜಕೀಯ ದ್ವೇಷಕ್ಕಾಗಿ ಸಾರ್ವಜನಿಕವಾಗಿ ದೌರ್ಜನ್ಯ ಎಸಗಲು ಪೊಲೀಸರು ಕುಮ್ಮಕ್ಕು ನೀಡಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವೀರನಗೌಡ ಲೆಕ್ಕಿಹಾಳ, ವಿಧಾನ ಪರಿಷತ್ ಮಾಜಿ ಸದಸ್ಯ ಅಮರನಾಥ ಪಾಟೀಲ, ಮಾಜಿ ಸಂಸದ ಬಿ.ವಿ ನಾಯಕ, ಶಿವಬಸಪ್ಪ ಮಾಲಿ ಪಾಟೀಲ, ಮಾಜಿ ಶಾಸಕ ಬಸನಗೌಡ ಬ್ಯಾಗವಾಟ್, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ರವೀಂದ್ರ ಜಲ್ದಾರ್, ಯುವ ಘಟಕದ ಜಿಲ್ಲಾಧ್ಯಕ್ಷ ಎನ್.ವಿನಾಯಕ ರಾವ್, ಜಿಲ್ಲಾ ಘಟಕದ ವಕ್ತಾರ ಎಂ.ಸಿದ್ದನಗೌಡ ನೆಲಹಾಳ, ಕಾರ್ಯದರ್ಶಿ ಜಂಬಣ್ಣ ನೀಲಗಲ್, ನರಸರೆಡ್ಡಿ, ಎ.ಚಂದ್ರಶೇಖರ, ಈರೇಶ, ಜೆ.ಎಂ.ಮೌನೇಶ, ಬಿ.ಗೋವಿಂದ, ಕಡಗೋಳು ರಾಮಚಂದ್ರ, ಅಮರೇಶ ಪಾಟೀಲ ಸಿರವಾರ, ಶರಣಮ್ಮ ಕಾಮರೆಡ್ಡಿ, ವಿಜಯರಾಜೇಶ್ವರಿ, ವಾಣಿಶ್ರೀ, ಸುಮತಿ ಶಾಸ್ತ್ರಿ ಸೇರಿದಂತೆ ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.