ADVERTISEMENT

ಮಸ್ಕಿ: ಬಿಜೆಪಿಯಿಂದ ಸೇವಾ ಪಾಕ್ಷಿಕ ದಿನ ಆಚರಣೆ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2025, 7:14 IST
Last Updated 14 ಸೆಪ್ಟೆಂಬರ್ 2025, 7:14 IST
ಬಿಜೆಪಿ ಸೇವಾ ಪಾಕ್ಷಿಕ ದಿನದ ನಿಮಿತ್ತ ಮಸ್ಕಿಯ ಬಿಜೆಪಿ ಕಚೇರಿಯಲ್ಲಿ  ಶನಿವಾರ ನಡೆದ ಪದಾಧಿಕಾರಿಗಳ, ಮುಖಂಡರ ಸಭೆಯಲ್ಲಿ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಮಾತನಾಡಿದರು
ಬಿಜೆಪಿ ಸೇವಾ ಪಾಕ್ಷಿಕ ದಿನದ ನಿಮಿತ್ತ ಮಸ್ಕಿಯ ಬಿಜೆಪಿ ಕಚೇರಿಯಲ್ಲಿ  ಶನಿವಾರ ನಡೆದ ಪದಾಧಿಕಾರಿಗಳ, ಮುಖಂಡರ ಸಭೆಯಲ್ಲಿ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಮಾತನಾಡಿದರು   

ಮಸ್ಕಿ: ‘ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ರಾಷ್ಟ್ರ ಪುರುಷರ ಜನ್ಮದಿನದ ಅಂಗವಾಗಿ ಸೆ.17ರಿಂದ ಅ.2 ರವರಗೆ ಸೇವಾ ಪಾಕ್ಷಿಕ ದಿನ ಆಚರಿಸಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಬಿಜೆಪಿ ನಿರ್ಧರಿಸಿದೆ’ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ತಿಳಿಸಿದರು.

ಪಟ್ಟಣದ ಬಸವೇಶ್ವರ ನಗರದ ಬಿಜೆಪಿ ಕಚೇರಿಯಲ್ಲಿ ಶನಿವಾರ ನಡೆದ ಪಕ್ಷದ ಪದಾಧಿಕಾರಿಗಳ, ಮುಖಂಡರ ಸಭೆಯಲ್ಲಿ ಮಾತನಾಡಿದರು.

ಸೆ.17ರಂದು ಪ್ರಧಾನ ನರೇಂದ್ರ ಮೋದಿ ಅವರ ಜನ್ಮದಿನ, ಸೆ.25ರಂದು ಪಂ.ದೀನ ದಯಾಳ ಹಾಗೂ ಅ.2 ರಂದು ಮಹಾತ್ಮ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನ. ಈ ಮೂರು ದಿನಗಳಲ್ಲಿ ಸಸಿ ನೆಡುವ, ಸ್ವಚ್ಛತೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಮಸ್ಕಿ ಕ್ಷೇತ್ರದ ಎಲ್ಲಾ ಬೂತ್‌ಗಳಲ್ಲಿ ಕೈಗೊಳ್ಳಲಾಗುವುದು ಎಂದರು.

ADVERTISEMENT

ಪಕ್ಷದ ಪದಾಧಿಕಾರಿಗಳು, ಮುಖಂಡರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ಸೇವಾ ದಿನವನ್ನು ಯಶಸ್ವಿಯಾಗಿಸಬೇಕು ಎಂದು ಕರೆ ನೀಡಿದರು.

ಪುರಸಭೆ ಅಧ್ಯಕ್ಷ ಮಲ್ಲಯ್ಯ ಅಂಬಾಡಿ, ಪಕ್ಷದ ಮಂಡಲ ಅಧ್ಯಕ್ಷ ಶರಣಬಸವ ಸೊಪ್ಪಿಮಠ ಮಾತನಾಡಿದರು.

ಹಿರಿಯ ಮುಖಂಡ ಮಲ್ಲಪ್ಪ ಅಂಕುಶದೊಡ್ಡಿ, ಬಸವಂತರಾಯ ಕುರಿ, ಜಿಲ್ಲಾ ಘಟಕದ ಉಪಾಧ್ಯಕ್ಷ ಚಂದ್ರಕಾಂತ ಪಾಟೀಲ ಗೂಗೆಬಾಳ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸಂತೋಷ ರಾಜಗುರು, ಮಂಡಲ ಪ್ರಧಾನ ಕಾರ್ಯದರ್ಶಿ ಬಸವರಾಜ ಗುಡಿಹಾಳ, ರಮೇಶ ನಾಯಕ, ಪ್ರಸನ್ನ ಪಾಟೀಲ, ಮೌನೇಶ ನಾಯಕ, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಚೇತನ ಪಾಟೀಲ, ವೆಂಕಟೇಶ ಕೋಳಬಾಳ ಸೇರಿದಂತೆ ವಿವಿಧ ಮೊರ್ಚಾಗಳ ಪದಾಧಿಕಾರಿಗಳು, ಮುಖಂಡರು, ಪುರಸಭೆಯ ಬಿಜೆಪಿ ಸದಸ್ಯರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.