ADVERTISEMENT

ಗ್ಯಾರಂಟಿ ಹೆಸರಿನಲ್ಲಿ ಹಣ ದುರ್ಬಳಕೆ ಆರೋಪ: ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2025, 14:01 IST
Last Updated 3 ಮಾರ್ಚ್ 2025, 14:01 IST
ರಾಯಚೂರಿನ ಡಾ.ಬಿ.ಆರ್.ಅಂಬೇಡ್ಕ‌ರ್ ವೃತ್ತದ ಬಳಿ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಸೋಮವಾರ  ಪ್ರತಿಭಟನೆ ನಡೆಸಿದರು
ರಾಯಚೂರಿನ ಡಾ.ಬಿ.ಆರ್.ಅಂಬೇಡ್ಕ‌ರ್ ವೃತ್ತದ ಬಳಿ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಸೋಮವಾರ  ಪ್ರತಿಭಟನೆ ನಡೆಸಿದರು   

ರಾಯಚೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಹೆಸರಿನಲ್ಲಿ ದಲಿತರ ಹಣ ದುರ್ಬಳಕೆ ಮಾಡಿಕೊಂಡು ಅನ್ಯಾಯ ಮಾಡಿದೆ ಎಂದು ಆರೋಪಿಸಿ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಸೋಮವಾರ ಇಲ್ಲಿಯ ಡಾ.ಬಿ.ಆರ್‌.ಅಂಬೇಡ್ಕರ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ವೀರಶೈವ ಕಲ್ಯಾಣ ಮಂಟಪದಿಂದ ಪ್ರತಿಭಟನಾ ಮೆರವಣಿಗೆ ಹೊರಟು ಬಸವೇಶ್ವರ ವೃತ್ತದ ಮಾರ್ಗವಾಗಿ ಡಾ.ಬಿ.ಆರ್.ಅಂಬೇಡ್ಕ‌ರ್ ವೃತ್ತಕ್ಕೆ ಬಂದರು. ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಡವರ ಹೊಟ್ಟೆ ಮೇಲೆ ಹೊಡೆದ ಕಾಂಗ್ರೆಸ್ ಸರ್ಕಾರ ತೊಲಗಬೇಕು ಎಂದು ಘೋಷಣೆ ಕೂಗಿದರು.

ಮಾಜಿ ಶಾಸಕ ತಿಪ್ಪರಾಜು ಹವಾಲ್ದಾರ್ ಮಾತನಾಡಿ, ‘ರಾಜ್ಯ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಕಾರ್ಯಕ್ಕೆ ಮೀಸಲಿಟ್ಟ ಎಲ್ಲ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಕೊಟ್ಟು ಅನ್ಯಾಯ ಮಾಡಿದೆ. ಕಾಂಗ್ರೆಸ್ ಸರ್ಕಾರ ಪರಿಶಿಷ್ಟರ ಹಣ ನುಂಗಿದೆ’ ಎಂದು  ದೂರಿದರು.

ADVERTISEMENT

‘ಪರಿಶಿಷ್ಟ ಜಾತಿ, ಪಂಗಡ ಜನಾಂಗದ ಅನುದಾನವನ್ನು ಅನ್ಯ ಯೋಜನೆಗಳಿಗೆ ಬಳಕೆ ಮಾಡಬಾರದು ಎಂದು ಕಾನೂನಿನಲ್ಲಿ ಇದೆ. ಆದರೆ, ಸಿದ್ಧರಾಮಯ್ಯ ನೇತೃತ್ವದಲ್ಲಿ ಗ್ಯಾರಂಟಿಗೆ ಬಳಕೆ ಮಾಡಿದ್ದು ಖಂಡನೀಯ’ ಎಂದು ಹೇಳಿದರು.

ನಂತರ ಪ್ರತಿಭಟನಾಕಾರರು ರಾಯಚೂರು ತಹಶೀಲ್ದಾರ್ ಸುರೇಶ ಅವರಿಗೆ ಮನವಿ ಸಲ್ಲಿಸಿದರು.

ಮಾಜಿ ಸಂಸದರಾದ ಬಿ.ವಿ.ನಾಯಕ, ಕೆ.ವಿರೂಪಾಕ್ಷಪ್ಪ, ಮಾಜಿ ಶಾಸಕ ಗಂಗಾಧರ ನಾಯಕ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಂಕರ ರೆಡ್ಡಿ, ಎಸ್‌.ಸಿ. ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಯಲ್ಲಪ್ಪ, ವೀರೇಶ ನಾಯಕ, ಕಡಗೋಲ ಆಂಜನೇಯ, ರಾಜಕುಮಾರ, ಮಂಡಲ ಅಧ್ಯಕ್ಷ ಶಂಕರ ಗೌಡ ಮಿರ್ಜಾಪುರು, ಜಿಲ್ಲಾ ಪಂಚಾಯಿತಿ ಸದಸ್ಯ ಎನ್. ಶಂಕರಪ್ಪ, ರವೀಂದ್ರ ಜಲ್ದಾರ, ಶರಣಮ್ಮ, ಸಂತೋಷ, ಪ್ರಸನ್ನ ಮಸ್ಕಿ, ವೀರನಗೌಡ, ಜಂಬಣ್ಣ ಸುಧಾಕರ, ಶರಣಬಸವ ಸೊಪ್ಪಿಮಠ, ಯಂಕೋಬ ನಾಯಕ, ದೇವರಾಜ್ ಗೌಡ ಸಿರವಾರ, ವಿಜಯಕುಮಾರ ಸಜ್ಜನ, ನಗರಸಭೆ ಸದಸ್ಯರಾದ ನಾಗರಾಜ್, ಶಶಿರಾಜ್, ಶಂಕ್ರಪ್ಪ, ಶ್ರೀನಿವಾಸ್ ರೆಡ್ಡಿ, ನರಸರೆಡ್ಡಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.