ರಾಯಚೂರು: ‘ಅಪಘಾತದಂಥ ಸಂದರ್ಭದಲ್ಲಿ ಎಷ್ಟೋ ಜನ ಸರಿಯಾದ ಸಮಯಕ್ಕೆ ರಕ್ತ ದೊರೆಯದೆ ಸಾವನ್ನಪ್ಪಿದ್ದಾರೆ. ರಕ್ತದಾನ ಮಾಡುವ ಮೂಲಕ ಇನ್ನೊಬರ ಜೀವ ಉಳಿಸಬೇಕಾಗಿದೆ’ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಹೇಳಿದರು.
ಇಲ್ಲಿಯ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ವಿಶ್ವ ಸಹೋದರತ್ವ ದಿನದ ಅಂಗವಾಗಿ ಆಯೋಜಿಸಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.
‘ಸಾಮಾಜಿಕ ಜಾವಾಬ್ದಾರಿಯ ಭಾಗವಾಗಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ರಕ್ತದಾನ ಶಿಬಿರ ಹಮ್ಮಿಕೊಂಡ ಕಾರ್ಯ ಶ್ಲಾಘನೀಯವಾಗಿದೆ’ ಎಂದು ತಿಳಿಸಿದರು.
ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಬಿ.ಕೆ.ಸ್ಮಿತಾ, ಮಹಾನಗರ ಪಾಲಿಕೆ ಮೇಯರ್ ನರಸಮ್ಮ ಮಾಡಗಿರಿ, ಕಾಂಗ್ರೆಸ್ ಹಿರಿಯ ಮುಖಂಡರಾದ ಜಯಣ್ಣ, ಜಿ. ಶಿವಮೂರ್ತಿ, ರುದ್ರಪ್ಪ ಅಂಗಡಿ, ಅಮರೇಗೌಡ ಹಂಚಿನಾಳ, ನರಸಿಂಹಲು ಮಾಡಗಿರಿ, ಗುರುಸ್ವಾಮಿ ಕಲ್ಲೂರು ಹಾಗೂ ರಾಜಶೇಖರ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.