ಸಾವು
ಪ್ರಾತಿನಿಧಿಕ ಚಿತ್ರ
ಸಿಂಧನೂರು: ತಾಲ್ಲೂಕಿನ ತುರ್ವಿಹಾಳ ಪಟ್ಟಣದ ಸಿಂಧನೂರು ಮುಖ್ಯರಸ್ತೆಯಲ್ಲಿ ಆ.13 ರಂದು ಬೆಳಗಿನ ಜಾವ ವಾಯುವಿಹಾರಕ್ಕೆ ತೆರಳಿ ವಾಪಸ್ ಬರುತ್ತಿದ್ದಾಗ ಬೊಲೆರೊ ವಾಹನ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿ ಅಭಿಷೇಕ ಮೋತಿಲಾಲ್ ದೇಸಾಯಿ ಭೋಗಾಪುರ ಶುಕ್ರವಾರ ನಿಧನರಾಗಿದ್ದಾರೆ ಎಂದು ತುರ್ವಿಹಾಳ ಪೊಲೀಸರು ಖಚಿತಪಡಿಸಿದ್ದಾರೆ.
ಅಪಘಾತಕ್ಕೀಡಾಗಿದ್ದ ನಾಲ್ವರ ಪೈಕಿ ವಿದ್ಯಾರ್ಥಿ ವೆಂಕಟೇಶಗೆ ಕಾಲು ಮುರಿದಿದ್ದು ಸಿಂಧನೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯವಾಗಿದ್ದರಿಂದ ಗುಣಮುಖರಾಗಿದ್ದಾರೆ.
ಮೂವರು ಅಮಾನತು: ಘಟನೆಗೆ ಸಂಬಂಧಿಸಿದಂತೆ ತುರ್ವಿಹಾಳ ಪಟ್ಟಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ (ಗುಂಜಳ್ಳಿ)ಯ ಪ್ರಾಚಾರ್ಯ ಗಂಗಪ್ಪ ಕವಿತಾಳ, ವಾರ್ಡನ್ ಗೋಪಾಲ ಮತ್ತು ದೈಹಿಕ ಶಿಕ್ಷಣ ಶಿಕ್ಷಕ ದಾವಲಸಾಬ್ ಅವರನ್ನು ನಿರ್ಲಕ್ಷ್ಯದ ಆಧಾರದ ಮೇಲೆ ಅಮಾನತು ಮಾಡಿ ರಾಯಚೂರು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಸಿಂಧು ಆದೇಶ ಹೊರಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.