ADVERTISEMENT

ಅಂಬೇಡ್ಕರ್‌ ಹೆಸರಿನ ಧ್ವಜಾ ಸ್ತಂಭ ಧ್ವಂಸ: ಕ್ರಮಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2021, 12:48 IST
Last Updated 11 ಏಪ್ರಿಲ್ 2021, 12:48 IST
ರಾಯಚೂರು ತಾಲ್ಲೂಕಿನ ಸಗಮಕುಂಟಾ ಗ್ರಾಮದಲ್ಲಿ ಧ್ವಂಸಗೊಂಡ ಧ್ವಜಾಸ್ತಂಭದ ಎದುರು ದಲಿತ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದರು
ರಾಯಚೂರು ತಾಲ್ಲೂಕಿನ ಸಗಮಕುಂಟಾ ಗ್ರಾಮದಲ್ಲಿ ಧ್ವಂಸಗೊಂಡ ಧ್ವಜಾಸ್ತಂಭದ ಎದುರು ದಲಿತ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದರು   

ರಾಯಚೂರು: ಡಾ.ಬಿ.ಆರ್.ಅಂಬೇಡ್ಕರ್ ಹೆಸರಿನಲ್ಲಿ ನಿರ್ಮಿಸಿದ್ದ ಧ್ವಜಾಸ್ತಂಭವನ್ನು ಧ್ವಂಸಗೊಳಿಸಿದ ಕಿಡಿಗೇಡಿಗಳನ್ನು ಬಂಧಿಸಿ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ದಲಿತ ಸಂಘಟನೆಗಳ ಮುಖಂಡರು ಒತ್ತಾಯಿಸಿದರು.

ತಾಲ್ಲೂಕಿನ ಸಗಮಕುಂಟ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಅನುಯಾಯಿಗಳ ಯುವಕ ಸಂಘದ ಪದಾಧಿಕಾರಿಗಳು ಸ್ತಂಭವನ್ನು ನಿರ್ಮಿಸಿದ್ದರು. ಆದರೆ ರಾತ್ರೋ ರಾತ್ರಿ ಕೆಲ ಕಿಡಿಗೇಡಿಗಳು ಅದನ್ನು ಧ್ವಂಸಗೊಳಿಸಿ ಅಪಮಾನ ಮಾಡಿದ್ದು ಖಂಡನೀಯ. ಕೂಡಲೇ ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರಾಷ್ಟ್ರೀಯ ಮಾದಿಗ ಜಾಗೃತಿ ಸೇನೆ ರಾಜ್ಯಾಧ್ಯಕ್ಷ ರಾಘವೇಂದ್ರ ಬೋರೆಡ್ಡಿ, ಮಾದಿಗ ದಂಡೋರ ರಾಜ್ಯಾಧ್ಯಕ್ಷ ನರಸಪ್ಪ ದಂಡೋರ, ಡಾ.ಬಿ.ಆರ್.ಯುವ ಘರ್ಜನೆ ಸೇನೆ ಅಧ್ಯಕ್ಷ ತಿಮ್ಮಪ್ಪ ಗಂಜಹಳ್ಳಿ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT