ರಾಯಚೂರು: ಜಿಲ್ಲೆಯ ಸಿರವಾರ ತಾಲ್ಲೂಕಿನ ನುಗಡೋಣಿ-ಹೊಸೂರು ಬಳಿ ಕುಸಿದಿದ್ದ ಸಿದ್ದಗರ್ಚಿ ಸೇತುವೆ ವೀಕ್ಷಣೆಗಾಗಿ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಹೋಗಿದ್ದ ವೇಳೆ ಮತ್ತೆ ಸೇತುವೆ ಕುಸಿತವಾಗಿದ್ದರಿಂದ ಕೂದಲೆಳೆ ಅಂತರದಲ್ಲಿ ಶಾಸಕರು ಅಪಾಯದಿಂದ ಪಾರಾದ ಘಟನೆ ಸೋಮವಾರ ಸಂಜೆ ನಡೆದಿದೆ.
ಈಚೆಗೆ ಸುರಿದ ನಿರಂತರ ಮಳೆಯಿಂದ ಹಳ್ಳಕೊಳ್ಳ ತುಂಬಿ ಹರಿದಿದ್ದರಿಂದ ಸೇತುವೆ ಕುಸಿತವಾಗಿ ಸಂಪರ್ಕ ಕಡಿತವಾಗಿತ್ತು.
ಘಟನೆಯಲ್ಲಿ ನಾಲ್ಕು ಮಂದಿಗೆ ಗಾಯವಾಗಿದ್ದು, ಗಾಯಾಳುಗಳನ್ನು ಶಾಸಕರೇ ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ಕರೆದೊಯ್ದರು.
ಶಾಸಕರೊದಿಗೆ ಹೆಚ್ಚು ಜನರು ಜಮಾಯಿಸಿದ್ದು ಅವಗಢಕ್ಕೆ ಕಾರಣವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.