ADVERTISEMENT

ರಾಯಚೂರು: ಕುಟುಂಬದೊಂದಿಗೆ ರಾಯರ ದರ್ಶನ ಪಡೆದ ಬಿ.ಎಸ್.ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2022, 5:08 IST
Last Updated 11 ಆಗಸ್ಟ್ 2022, 5:08 IST
ಬಿ.ಎಸ್.ಯಡಿಯೂರಪ್ಪ ಅವರು ಕುಟುಂಬದ ಸದಸ್ಯರೊಂದಿಗೆ ಮಂತ್ರಾಲಯಕ್ಕೆ ಭೇಟಿ ನೀಡಿದ್ದಾರೆ.
ಬಿ.ಎಸ್.ಯಡಿಯೂರಪ್ಪ ಅವರು ಕುಟುಂಬದ ಸದಸ್ಯರೊಂದಿಗೆ ಮಂತ್ರಾಲಯಕ್ಕೆ ಭೇಟಿ ನೀಡಿದ್ದಾರೆ.   

ರಾಯಚೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕುಟುಂಬದ ಸದಸ್ಯರೊಂದಿಗೆ ಮಂತ್ರಾಲಯಕ್ಕೆ ಬುಧವಾರ ರಾತ್ರಿಯೇ ಬಂದಿದ್ದು, ಗುರುವಾರ ಬೆಳಿಗ್ಗೆ ಶ್ರೀರಾಘವೇಂದ್ರ ಸ್ವಾಮಿಗಳ ವೃಂದಾವನ ದರ್ಶನ ಪಡೆದರು.

ಆನಂತರ ಮಠದ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರನ್ನು ಭೇಟಿಮಾಡಿ ಆಶೀರ್ವಾದ ಪಡೆದರು. ಬಿ.ವೈ.ವಿಜಯೇಂದ್ರ ಹಾಗೂ‌‌‌ ಬಿ.ವೈ.ರಾಘವೇಂದ್ರ ದಂಪತಿ ಸಮೇತರಾಗಿ ಬಂದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.