ADVERTISEMENT

ಯಡಿಯೂರಪ್ಪ–ನಳೀನಕುಮಾರ್‌ ನಿಜವಾದ ಜೋಡೆತ್ತು: ಎನ್‌.ರವಿಕುಮಾರ್

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2020, 14:49 IST
Last Updated 13 ನವೆಂಬರ್ 2020, 14:49 IST
ಎನ್‌.ರವಿಕುಮಾರ್‌
ಎನ್‌.ರವಿಕುಮಾರ್‌   

ಮಸ್ಕಿ: ‘ರಾಜ್ಯದಲ್ಲಿ ನಿಜವಾದ ಜೋಡೆತ್ತು ಎಂದರೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್‌ ಕಟೀಲ್‌’ ಎಂದು ವಿಧಾನ ಪರಿಷತ್‌ ಸದಸ್ಯ ಎನ್‌.ರವಿಕುಮಾರ್‌ ಹೇಳಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆರ್.ಆರ್. ನಗರ ಹಾಗೂ ಶಿರಾ ವಿಧಾನಸಭೆ ಉಪ ಚುನಾವಣೆ ಹಾಗೂ ನಾಲ್ಕು ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅತಿಹೆಚ್ಚು ಮತಗಳಿಂದ ಗೆದ್ದಿದೆ’ ಎಂದರು.

ಮಸ್ಕಿ ಹಾಗೂ ಬಸವ ಕಲ್ಯಾಣ ವಿಧಾನಸಭಾ ಉಪ ಚುನಾವಣೆ ಹಾಗೂ ಬೆಳಗಾವಿ ಲೋಕಸಭಾ ಚುನಾವಣೆಯಲ್ಲಿಯೂ ಬಿಜೆಪಿ ಅತಿಹೆಚ್ಚು ಮತಗಳಿಂದ ಗೆಲುವು ಸಾಧಿಸಲಿದೆ ಎಂದು ಹೇಳಿದರು.

ADVERTISEMENT

ಕಾಂಗ್ರೆಸ್ ಗೆ ರಾಜ್ಯದ ಅಭಿವೃದ್ಧಿಗಿಂತ ಸ್ವ ಅಭಿವೃದ್ಧಿ ಮುಖ್ಯವಾಗಿದೆ. ಆ ಕಾರಣಕ್ಕಾಗಿ ಕಾಂಗ್ರೆಸ್ ಮೂಲೆ ಗುಂಪಾಗಿದೆ. ಮಸ್ಕಿ ವಿಧಾನಸಭಾ ಕ್ಷೇತ್ರ ಬಿಜೆಪಿಯ ಭದ್ರ‌ಕೋಟೆ. ಪ್ರತಾಪಗೌಡ ಪಾಟೀಲ ಅವರು ಅತಿಹೆಚ್ವು ಮತಗಳ ಅಂತರದಿಂದ ಆಯ್ಕೆಯಾಗಲಿದ್ದಾರೆ. ಪ್ರತಿಗ್ರಾಮ ಪಂಚಾಯತಿ ಹಾಗೂ ಬೂತ್‌ ಮಟ್ಟದಲ್ಲಿ ಮುಖಂಡರಿಗೆ ಉಸ್ತುವಾರಿ ವಹಿಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.