ರಾಯಚೂರು: ರಾಜ್ ಬಜೆಟ್ ಮೂಲಕ ಸಿದ್ದರಾಮಯ್ಯ ಅವರು ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರಕ್ಕೆ ಬಂಪರ್ ಕೊಡುಗೆ ನೀಡಿದ್ದಾರೆ ಎಂದು ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಹೇಳಿದ್ದಾರೆ.
ಗುಂಜಳ್ಳಿ ಬಸಪ್ಪ ಕೆರೆ ತುಂಬಿಸುವ ಯೋಜನೆಗೆ ₹ 146 ಕೋಟಿ, ಮಂತ್ರಾಲಯಕ್ಕೆ ಸಂಪರ್ಕ ಕಲ್ಪಿಸಲು ರಾಯಚೂರು ತಾಲ್ಲೂಕಿನ ಚಿಕ್ಕ ಮಂಚಾಲಿ ಗ್ರಾಮದ ಬಳಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣಕ್ಕೆ ₹ 158 ಕೋಟಿ, ಗ್ರಾಮೀಣ ಕ್ಷೇತ್ರದ ಕುರ್ಡಿ ಕೆರೆ ತುಂಬಿಸುವ ಯೋಜನೆ, ಒಣ ಮೆಣಸಿನಕಾಯಿ ಮಾರುಕಟ್ಟೆ ನಿರ್ಮಾಣಕ್ಕೆ ₹ 25ಕೋಟಿ ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಯಲ್ಲಿ ಶಿಥಿಲ ಗೃಹಗಳ ನಿರ್ಮಾಣಕ್ಕೆ ₹ 40 ಕೋಟಿ ಒದಗಿಸಿದ್ದಾರೆ ಎಂದು ತಿಳಿಸಿದ್ದಾರೆ.
‘ಅಧಿವೇಶನದಲ್ಲಿ ಧ್ವನಿ ಎತ್ತಿದರ ಫಲವಾಗಿ ರಾಯಚೂರು ವಿಮಾನ ನಿಲ್ದಾಣ ನಿರ್ಮಾಣಕ್ಕೆ ₹ 220 ಘೋಷಿಸಲಾಗಿದೆ. ಬಜೆಟ್‌ನಲ್ಲಿ ರೈತರ ಹಿತ ಕಾಯಲಾಗಿದೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.