ರಾಯಚೂರು: ನಗರದ ಹೊರವಲಯದ ಸಾಥ್ ಮೈಲ್ ಬಳಿ ಶುಕ್ರವಾರ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಸ್ಲೀಪರ್ ಬಸ್ ಉರುಳಿ ಪ್ರಯಾಣಿಕರೊಬ್ವರ ಕಾಲು ಮುರಿದು, ಬಸ್ಸಿನಲ್ಲಿದ್ದ 15 ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ದಾವಣಗೆರೆಯಿಂದ ರಾಯಚೂರಿಗೆ ಬರುತ್ತಿದ್ದ ಸ್ಲೀಪರ್ ಕೋಚ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಾಲಕ ನಿದ್ದೆ ಮಂಪರಿನಲ್ಲಿದ್ದ ಕಾರಣ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಜಮೀನಿಗೆ ಉರುಳಿದೆ ಎನ್ನಲಾಗುತ್ತಿದೆ.
ಸ್ಥಳಕ್ಕೆ ಅಗ್ನಿಶಾಮಕದ ದಳದ ಸಿಬ್ಬಂದಿ ಹಾಗೂ ಪೊಲೀಸರು ಆಗಮಿಸಿ ಪ್ರಯಾಣಿಕರನ್ನು ಹೊರತೆಗೆದು, ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಯಚೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.