ಪ್ರಜಾವಾಣಿ ವಾರ್ತೆ
ಲಿಂಗಸುಗೂರು: ‘ಶಾಲಾ-ಕಾಲೇಜು ಸಮಯಕ್ಕೆ ಬಸ್ ಬರುತ್ತಿಲ್ಲ’ ಎಂದು ಅಸಮಾಧಾನ್ಯ ವಕ್ತಪಡಿಸಿ, ತಾಲ್ಲೂಕಿನ ನೀರಲಕೇರಾ ಗ್ರಾಮದಲ್ಲಿ ವಿದ್ಯಾರ್ಥಿಗಳು ಸೋಮವಾರ ಬಸ್ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.
‘ನೀರಲಕೇರಾ ಗ್ರಾಮದ ವಿದ್ಯಾರ್ಥಿಗಳು ಶಾಲಾ-ಕಾಲೇಜಿಗಳಿಗೆ ಪ್ರತಿದಿನವೂ ಲಿಂಗಸುಗೂರು ಪಟ್ಟಣಕ್ಕೆ ತೆರಳುತ್ತಾರೆ. ಆದರೆ ಶಾಲಾ ಸಮಯಕ್ಕೆ ಬಸ್ ಬರದೇ, ಪ್ರತಿದಿನವೂ ತಡವಾಗಿ ಶಾಲಾ-ಕಾಲೇಜಿಗಳಿಗೆ ತೆರಳುವಂತಾಗಿದೆ. ಈ ಬಗ್ಗೆ ಸಾರಿಗೆ ಘಟಕದ ವ್ಯವಸ್ಥಾಪಕರಿಗೆ ಲಿಖಿತ ಹಾಗೂ ಮೌಖಿಕವಾಗಿ ಮನವಿ ಸಲ್ಲಿಸಿದರೂ ಸ್ಪಂದಿಸಿರಲಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಮತ್ತಷ್ಟು ತೊಂದರೆ ಅನುಭವಿಸುವಂತಾಗಿದೆ’ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.
‘ಮರಗಂಟನಾಳ, ಚಿತ್ರನಾಳ, ನೀರಲಕೇರಿ ಗ್ರಾಮಕ್ಕೆ ಬೆಳಿಗ್ಗೆ 7 ಗಂಟೆಗೆ, ಮಧ್ಯಾಹ್ನ 12.30 ಗಂಟೆಗೆ ಹಾಗೂ ಸಂಜೆ 4.30 ಮತ್ತು 5.30 ಕ್ಕೆ ಹೆಚ್ಚುವರಿ ಬಸ್ ಒದಗಿಸಬೇಕು. ಹಳೆಯ ಬಸ್‌ಗಳನ್ನು ಓಡಿಸುತ್ತಿರುವುದರಿಂದ ಪದೇ ಪದೆ ಬಸ್ ಕೆಟ್ಟು ನಿಲ್ಲುತ್ತಿವೆ. ಇದರಿಂದ ಸಮಸ್ಯೆ ಹೆಚ್ಚಾಗುತ್ತಿದೆ. ಹೊಸ ಬಸ್‌ಗಳನ್ನು ಓಡಿಸಬೇಕು ಎಂದು ಕರುನಾಡ ವಿಜಯಸೇನೆ ಸಂಘಟನೆ ತಾಲ್ಲೂಕು ಅಧ್ಯಕ್ಷ ಹನುಮಂತ ಬಡಿಗೇರ ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.