ಹಟ್ಟಿ ಚಿನ್ನದ ಗಣಿ: ಪಟ್ಟಣದಿಂದ ಲಿಂಗಸುಗೂರಿಗೆ ತೆರಳುತ್ತಿದ್ದ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಚಾಲಕನ ಸಮಯ ಪ್ರಜ್ಞೆ ಯಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಈ ಬಸ್ ಶನಿವಾರ ಬೆಳಿಗ್ಗೆ ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳನ್ನು ಹೊತ್ತು ಲಿಂಗಸುಗೂರಿಗೆ ತೆರಳುತ್ತಿತ್ತು. ಪಟ್ಟಣದ ಪೊಲೀಸ್ ಠಾಣೆ ಬಳಿ ಚಕ್ರದ ಕೆಳಗೆ ಬೆಂಕಿ ಕಾಣಿಸಿಕೊಂಡಿದೆ. ಚಕ್ರ ಅಡ್ಡದಿಡ್ಡಿಯಾಗಿ ಚಲಿಸಿದೆ. ಇದನ್ನು ಮನಗಂಡ ಚಾಲಕ ರಮೇಶ ಕೆಳಗಿಳಿದು ಬಂದು ನೋಡಿದಾಗ ವೈರಿಂಗ್‌ನಲ್ಲಿ ಬೆಂಕಿ ಹೊತ್ತಿಕೊಂಡಿರುವುದನ್ನು ಕಂಡು ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ನಂತರ ಸಾರ್ವಜನಿಕರು ನೀರು ಹಾಕಿ ಬೆಂಕಿ ನಂದಿಸಿದ್ದಾರೆ.
‘ಚಾಲಕನ ಸಮಯ ಪ್ರಜ್ಞೆಯಿಂದ ಹಲವು ಜೀವಗಳು ಉಳಿದವು’ ಎಂದು ಪ್ರತ್ಯಕ್ಷದರ್ಶಿ ಶಿವನಗೌಡ ತಿಳಿಸಿದರು.
ಸಾರಿಗೆ ಸಂಸ್ಥೆ ಹಳೆಯ ಹಾಗೂ ಕೆಟ್ಟ ಗಾಡಿಗಳನ್ನು ಓಡಿಸುತ್ತಿದೆ. ಜನರ ಜೀವನದ ಜೊತೆ ಅಧಿಕಾರಿಗಳು ಆಟ ಆಡುತ್ತಿದ್ದಾರೆ. ಈಗಲಾದರೂ ಎಚ್ಚೆತ್ತುಕೊಂಡು ಸುಸ್ಥಿತಿಯಲ್ಲಿರುವ ಬಸ್‌ಗಳನ್ನು ಬಿಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಗಾಡಿ ನೇರವಾಗಿ ಹೋಗಲಿಲ್ಲ. ಅನುಮಾನ ಬಂದು ಕೆಳಗಿಳಿದು ನೊಡಿದಾಗ ಟೈರ್ ಕೆಳಗಡೆ ಬೆಂಕಿ ಹೊತ್ತಿಕೊಂಡಿರುವುದು ಕಂಡುಬಂದಿತು. ಜನರನ್ನು ಕೆಳಗಿಳಿಸಿ ಸಾರ್ವಜನಿಕರ ಸಹಕಾರದಿಂದ ಬೆಂಕಿ ನಂದಿಸಿದೆವು. ಅಹಿತಕರ ಘಟನೆ ಜರುಗಿಲ್ಲ ಎಂದು ಚಾಲಕ ರಮೇಶ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.