ರಾಯಚೂರು: ಜಿಲ್ಲೆಯ ಮಸ್ಕಿ ವಿಧಾನಸಭಾ ಉಪ ಚುನಾವಣಾ ಮತಗಳ ಎಣಿಕೆಯು ಮೇ 2 ರಂದು ನಗರದ ಎಸ್‌ಆರ್‌ಪಿಎಸ್ ಕಾಲೇಜಿನಲ್ಲಿ ನಡೆಯಲ್ಲಿದ್ದು, ಇದಕ್ಕಾಗಿ ಮಾಡಿರುವ ಪೂರ್ವಸಿದ್ಧತೆಗಳನ್ನು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ್ ಶುಕ್ರವಾರ ಪರಿಶೀಲಿಸಿದರು.
ಸ್ಟ್ರಾಂಗ್ ರೂಮ್‌ಗಳು, ಮತ ಎಣಿಕೆ ಕೊಠಡಿಗಳು ಸೇರಿದಂತೆ ಎಣಿಕಾ ಪ್ರಕ್ರಿಯೆಗಳಿಗೆ ಅಲ್ಲಿ ಕೈಗೊಳ್ಳಲಾಗುತ್ತಿದ್ದ ಸಿದ್ಧತೆಗಳ
ಕುರಿತು ಪರಿಶೀಲಿಸಿ, ಮತ ಎಣಿಕಾ ಕಾರ್ಯ ಯಶಸ್ವಿಯಾಗಿ ನಿರ್ವಹಿಸಲು ಸಲಹೆ ಸೂಚನೆಗಳನ್ನು
ನೀಡಿದರು.
ಚುನಾವಣಾ ಆಯೋಗದಿಂದ ಮತ ಎಣಿಕೆಯ ವೀಕ್ಷಕರಾಗಿ ನೇಮಕಗೊಂಡಿರುವ ರಾಜ್ ಕುಮಾರ್ ಸಾಗರ್ ಅವರೊಂದಿಗೆ ಇದೇ ಸಂದರ್ಭದಲ್ಲಿ ಮತ ಎಣಿಕೆಗೆ ಕೈಗೊಂಡ ಸಿದ್ಧತೆಗಳು, ನಿಯೋಜನೆಗೊಂಡ ಸಿಬ್ಬಂದಿ ಹಾಗೂ ಪ್ರಕ್ರಿಯೆಗಳ ಕುರಿತು ಜಿಲ್ಲಾಧಿಕಾರಿ ಚರ್ಚಿಸಿದರು. ಚುನಾವಣಾಧಿಕಾರಿ ಹಾಗೂ ಲಿಂಗಸುಗೂರು ಉಪವಿಭಾಗಾಧಿಕಾರಿ ರಾಜಶೇಖರ್ ಡಂಬಳ್, ಚುನಾವಣಾ ತಹಶಿಲ್ದಾರ್ ಜಾಕೀರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.