ADVERTISEMENT

ಲಿಂಗಸುಗೂರು: ಸಿಸಿ ರಸ್ತೆ ಕಾಮಗಾರಿ ಪರಿಶೀಲಿಸಿದ ಶಾಸಕ ಮಾನಪ್ಪ ವಜ್ಜಲ್

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2025, 6:29 IST
Last Updated 22 ನವೆಂಬರ್ 2025, 6:29 IST
<div class="paragraphs"><p>ಲಿಂಗಸುಗೂರು ಪಟ್ಟಣದಲ್ಲಿ ನಡೆಯುತ್ತಿರುವ ಸಿಸಿ ರಸ್ತೆ ಕಾಮಗಾರಿಯನ್ನು ಶಾಸಕ ಮಾನಪ್ಪ ವಜ್ಜಲ್ ಪರಿಶೀಲಿಸಿದರು</p></div>

ಲಿಂಗಸುಗೂರು ಪಟ್ಟಣದಲ್ಲಿ ನಡೆಯುತ್ತಿರುವ ಸಿಸಿ ರಸ್ತೆ ಕಾಮಗಾರಿಯನ್ನು ಶಾಸಕ ಮಾನಪ್ಪ ವಜ್ಜಲ್ ಪರಿಶೀಲಿಸಿದರು

   

ಲಿಂಗಸುಗೂರು: ಪಟ್ಟಣದ ಬಸವಸಾಗರ ಕ್ರಾಸ್‌ನಿಂದ ಗಡಿಯಾರ ವೃತ್ತದವರೆಗೆ ನಡೆದಿರುವ ಸಿಸಿ ರಸ್ತೆ ಕಾಮಗಾರಿಯನ್ನು ಶಾಸಕ ಮಾನಪ್ಪ ವಜ್ಜಲ್ ಶುಕ್ರವಾರ ಪರಿಶೀಲಿಸಿದರು.

‘ಗಡಿಯಾರ ವೃತ್ತದ ಮೂಲಕ ಸಾಗುವ ಎಲ್ಲಾ ರಸ್ತೆಗಳನ್ನು ಸಿಸಿ ಮಾಡಿಸಲಾಗುತ್ತಿದೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ₹20 ಕೋಟಿ ಅನುದಾನ ಒದಗಿಸಿದ್ದೇನೆ. ಕುಡಿಯುವ ನೀರಿನ ಕಾಮಗಾರಿ ನಡೆಯುತ್ತಿದ್ದರಿಂದ ಕೆಲವಡೆ ಸಿಸಿ ರಸ್ತೆ ಕಾಮಗಾರಿ ಆರಂಭಿಸಿಲ್ಲ’ ಎಂದರು.

ADVERTISEMENT

‘ಉತ್ತಮ ಗುಣಮಟ್ಟ ಕಾಪಾಡಿ ಶೀಘ್ರವಾಗಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಬಿಜೆಪಿ ಮಂಡಲ ಅಧ್ಯಕ್ಷ ಕೆ.ನಾಗಭೂಷಣ, ಮುಖಂಡರಾದ ಗಿರಿಮಲ್ಲನಗೌಡ ಕರಡಕಲ್, ಭೀಮಣ್ಣ ಹಿರೇಮನಿ, ವೆಂಕನಗೌಡ ಗುಡದನಾಳ ಸೇರಿದಂತೆ ಅನೇಕರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.