ADVERTISEMENT

ಸ್ಮಶಾನ ಭೂಮಿ ಹಂಚಿಕೆ: ಗ್ರಾಮಸಭೆ

​ಪ್ರಜಾವಾಣಿ ವಾರ್ತೆ
Published 24 ಜೂನ್ 2025, 12:38 IST
Last Updated 24 ಜೂನ್ 2025, 12:38 IST
ಕವಿತಾಳ ಸಮೀಪದ ಕೆ.ತಿಮ್ಮಾಪುರ ಗ್ರಾಮದಲ್ಲಿ ಸೋಮವಾರ ಅಧಿಕಾರಿಗಳು ಸ್ಮಶಾನ ಜಾಗವನ್ನು ಪರಿಶೀಲಿಸಿದರು
ಕವಿತಾಳ ಸಮೀಪದ ಕೆ.ತಿಮ್ಮಾಪುರ ಗ್ರಾಮದಲ್ಲಿ ಸೋಮವಾರ ಅಧಿಕಾರಿಗಳು ಸ್ಮಶಾನ ಜಾಗವನ್ನು ಪರಿಶೀಲಿಸಿದರು   

ಕವಿತಾಳ: ‘ಜಿಲ್ಲಾಧಿಕಾರಿ ಆದೇಶದಂತೆ ಗ್ರಾಮದ 124 ಸರ್ವೆ ನಂಬರ್ ಜಮೀನನ್ನು ಸ್ಮಶಾನಕ್ಕಾಗಿ ಹಂಚಿಕೆ ಮಾಡಲಾಗಿದೆ’ ಎಂದು ಚಿಂಚರಕಿ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಸಾಯಿರಾ ಬೇಗಂ ಹೇಳಿದರು.

ಪಂಚಾಯಿತಿ ವ್ಯಾಪ್ತಿಯ ಕಡ್ಡೋಣಿ ತಿಮ್ಮಾಪುರ ಗ್ರಾಮದಲ್ಲಿ ಸೋಮವಾರ ನಡೆದ ಗ್ರಾಮ ಸಭೆಯಲ್ಲಿ ಮಾತನಾಡಿ,‘ಸ್ಮಶಾನ ಜಾಗಕ್ಕಾಗಿ ಗ್ರಾಮಸ್ಥರು ಬೇಡಿಕೆ ಸಲ್ಲಿಸಿದ್ದರು. ಈ ಕುರಿತು ಜಿಲ್ಲಾಧಿಕಾರಿಗೆ ಪತ್ರ ಬರೆಯಲಾಗಿತ್ತು. ಈಗ ಭೂಮಿ ಮಂಜೂರು ಮಾಡಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ’ ಎಂದರು.

ಈ ವೇಳೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹುಲಿಗೆಮ್ಮ ಅಮರಪ್ಪ, ಗ್ರಾಮ ಡಳಿತಾಧಿಕಾರಿ ಅನಿಲ್‌, ಸಿಬ್ಬಂದಿ ರಾಯಪ್ಪ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.