
ಸಿಂಧನೂರು: ತಾಲ್ಲೂಕಿನ ಜವಳಗೇರಾ ಬಳಿಯ ಸೆಂಟ್ರಲ್ ಸ್ಟೇಟ್ ಫಾರ್ಮ್‍ನಲ್ಲಿ ಕೇಂದ್ರೀಯ ಕೃಷಿ ವಿಶ್ವ ವಿದ್ಯಾಲಯ ಸ್ಥಾಪಿಸಬೇಕು ಎಂದು ಒತ್ತಾಯಿಸಿ ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಅವರು ನವದೆಹಲಿಯಲ್ಲಿ ಕೇಂದ್ರ ಗ್ರಾಮೀಣಾಭಿವೃದ್ಧಿ ರಾಜ್ಯ ಖಾತೆ ಸಚಿವ ಕಮಲೇಶ್ ಪಾಸ್ವಾನ್ ಅವರಿಗೆ ಮನವಿ ಸಲ್ಲಿಸಿದರು.
ಜವಳಗೇರಾ ಬಳಿಯ ಸಿಎಸ್‍ಎಫ್ ವ್ಯಾಪ್ತಿಯಲ್ಲಿ 7,600 ಎಕರೆ ಜಮೀನು ಇದ್ದು, ಈ ಜಮೀನನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ನಿಟ್ಟಿನಲ್ಲಿ ಇದುವರೆಗೂ ಕೆಲಸಗಳಾಗಿಲ್ಲ. ಹಾಗಾಗಿ ಕೇಂದ್ರೀಯ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಿದರೆ ಈ ಭಾಗದ ಗ್ರಾಮೀಣ ಪ್ರದೇಶದಲ್ಲಿ ಕೃಷಿ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಬಸನಗೌಡ ಬಾದರ್ಲಿ ಅವರು ಮನವಿ ಮಾಡಿದ್ದಾರೆ. ಇದಕ್ಕೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.