
ರಾಯಚೂರು: ತಾಲ್ಲೂಕಿನ ಚಂದ್ರಬಂಡಾ ಹಾಗೂ ಬಾಯಿದೊಡ್ಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ಅನುಷ್ಠಾನಗೊಂಡ ಕಾಮಗಾರಿಗಳನ್ನು ಕೇಂದ್ರ ಆಡಿಟ್ ತಂಡದ ಅಧಿಕಾರಿ ಕುಮುದ್ ದುಬೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.
ಮೊದಲಿಗೆ ಚಂದ್ರಬಂಡಾ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ಕಾಮಗಾರಿ ಕಡತ, ನೋಂದಣಿ, ಎನ್.ಎಂ.ಎ.ಎಸ್. ಹಾಜರಾತಿಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಪಡೆದರು. ಬಳಿಕ
ಅರಿಸಿಗೇರಾ ತಾಂಡದಲ್ಲಿರುವ ದನದ ಕೊಟ್ಟಿಗೆ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ವೀಕ್ಷಿಸಿದರು.
ನಾಗನದೊಡ್ಡ ಗ್ರಾಮದಲ್ಲಿರುವ ಸಾಮಾಜಿಕ ಅರಣ್ಯದಲ್ಲಿ ಕಂದಕ ಬದು ನಿರ್ಮಾಣ, ದನದ ಕೊಟ್ಟಿಗೆ ಹಾಗೂ ಚಿಂತಲ ಕುಂಟ ಅಮೃತ ಸರೋವರ ಕೆರೆ ಕಾಮಗಾರಿಗಳನ್ನು ವೀಕ್ಷಿಸಿದರು.
ಚಂದ್ರಬಂಡಾಗ್ರಾಮದಲ್ಲಿರುವ ಕೀರಾಕುಂಟ ಅಮೃತ ಸರೋವರ ಕೆರೆ ಕಾಮಗಾರಿಯನ್ನು ಪರಿವೀಕ್ಷಣೆ ಮಾಡಿದರು. ಬಾಯಿದೊಡ್ಡಿ ಗ್ರಾಮ ಪಂಚಾಯಿತಿಯ ಕಡಗಂದೊಡ್ಡಿ ಗ್ರಾಮದ ರಸ್ತೆ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿದರು.
ನಂತರ ಕುರಬದೊಡ್ಡಿ ಗ್ರಾಮದ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕೂಲಿ ಕಾರ್ಮಿಕರ ಎನ್.ಎಂ.ಎ.ಎಸ್. ಹಾಜರಾತಿ, ಉದ್ಯೋಗ ಚೀಟಿ ಮತ್ತು ಕೆಲಸದ ಪ್ರಮಾಣವನ್ನು ಪರಿಶೀಲಿಸಿದರು. ನಂತರ ಚಂದ್ರಬಂಡಾ ಗ್ರಾಮ ಪಂಚಾಯಿತಿಯ ಕಟ್ಲಟ್ಕೂರು ಗ್ರಾಮದಲ್ಲಿ ಚರಂಡಿ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಪವಾರ, ಸಹಾಯಕ ನಿರ್ದೇಶಕ ಹನುಮಂತ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಡಿಪಿಎಂ, ತಾಂತ್ರಿಕ ಸಂಯೋಜಕರು, ತಾಂತ್ರಿಕ ಸಹಾಯಕರು, ಐಇಸಿ ಸಂಯೋಜಕರು, ಗ್ರಾಮ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.