ADVERTISEMENT

ಕೇಂದ್ರದಿಂದ ದೇಶದ ಸಮಗ್ರ ಅಭಿವೃದ್ಧಿ; ಕೇಂದ್ರ ಸಚಿವ ಭಗವಂತ ಖೂಬಾ ಹೇಳಿಕೆ

ಜನಾಶೀರ್ವಾದ ಸಭೆಯಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2021, 2:59 IST
Last Updated 19 ಆಗಸ್ಟ್ 2021, 2:59 IST
ರಾಯಚೂರಿನ ವೀರಶೈವ ಕಲ್ಯಾಣ ಮಂಟಪದಲ್ಲಿ ಬುಧವಾರ ಏರ್ಪಡಿಸಿದ್ದ ಬಿಜೆಪಿ ಜನಾಶೀರ್ವಾದ ಯಾತ್ರೆಯ ಸಭೆಯಲ್ಲಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಭಗವಂತ ಖೂಬಾ ಮಾತನಾಡಿದರು
ರಾಯಚೂರಿನ ವೀರಶೈವ ಕಲ್ಯಾಣ ಮಂಟಪದಲ್ಲಿ ಬುಧವಾರ ಏರ್ಪಡಿಸಿದ್ದ ಬಿಜೆಪಿ ಜನಾಶೀರ್ವಾದ ಯಾತ್ರೆಯ ಸಭೆಯಲ್ಲಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಭಗವಂತ ಖೂಬಾ ಮಾತನಾಡಿದರು   

ರಾಯಚೂರು: ದೇಶದ ಸಮಗ್ರ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಯೋಜನೆ ರೂಪಿಸಿಕೊಂಡು ಕೆಲಸ ಮಾಡುತ್ತಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಭಗವಂತ ಖೂಬಾ ಹೇಳಿದರು.

ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಬುಧವಾರ ಏರ್ಪಡಿಸಿದ್ದ ಬಿಜೆಪಿ ಜನಾಶೀರ್ವಾದ ಯಾತ್ರೆ ಸಭೆಯಲ್ಲಿ ಮಾತನಾಡಿದರು.

2014 ಹಾಗೂ 2019 ರಲ್ಲಿ ಬಿಜೆಪಿ ಪ್ರಚಂಡ ಬಹುಮತದೊಂದಿಗೆ ಕೇಂದ್ರದಲ್ಲಿ ಸರ್ಕಾರ ರಚನೆ ಮಾಡಿದೆ. ಅತಿಹೆಚ್ಚು ಹಿಂದುಳಿದ ವರ್ಗಗಳ ಸಚಿವರು ಕೇಂದ್ರ ಸರ್ಕಾರದಲ್ಲಿದ್ದಾರೆ. ಸಾಮಾಜಿಕ ನ್ಯಾಯ ಕೊಡಲು ಸರ್ಕಾರ ಬದ್ಧವಾಗಿದೆ. ಅಧಿವೇಶನದಲ್ಲಿ ಸದನದ ಪರಂಪರೆ ಪ್ರಕಾರ ನೂತನ ಸಚಿವರನ್ನು ಪರಿಚಯಿಸುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮುಂದಾಗಿದ್ದರು. ಆದರೆ, ಬೇರೆ ಪಕ್ಷಗಳು ಪರಿಚಯಕ್ಕೆ ಅವಕಾಶ ನೀಡಲಿಲ್ಲ ಎಂದರು.

ADVERTISEMENT

ಈ ಕಾರಣಕ್ಕಾಗಿ ಜನಾರ್ಶೀರ್ವಾದ ಯಾತ್ರೆ ಆರಂಭಿಸಲಾಗಿದ್ದು, ಎಲ್ಲ ಕಡೆಗೂ ಅದ್ಧೂರಿಯಾಗಿ ಜನರು ಸ್ವಾಗತಿಸುತ್ತಿದ್ದಾರೆ. ಪ್ರಪಂಚದ ಅತಿದೊಡ್ಡ ಪ್ರಜಾಪ್ರಭುತ್ವ ಹೊಂದಿರುವ ದೇಶ ಭಾರತವಾಗಿದ್ದು, ಇಂತಹ ದೇಶವನ್ನು ಮುನ್ನಡೆಸುವ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಯಶಸ್ವಿಯಾಗಿ ಮಾಡುತ್ತಿದ್ದಾರೆ. ಇದು ನಮ್ಮೆಲ್ಲರಿಗೂ ಅತ್ಯಂತ ಹೆಮ್ಮೆಯ ವಿಷಯವಾಗಿದೆ ಎಂದರು.

ರೈತರ ಸಾಲಮನ್ನಾ ಮಾಡುವ ಬದಲು ಲಕ್ಷಾಂತರ ರೈತರಿಗೆ ನೆರವು ತಲುಪಿಸುವ ಕೆಲಸ ಮಾಡುತ್ತಿದ್ದಾರೆ. ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ ಜಾರಿಗೊಳಿಸಿದ್ದಾರೆ. ಸಾಲಮನ್ನಾ ಘೋಷಿಸಿದ್ದ ಯುಪಿಎ ಸರ್ಕಾರ ನೀಡಿದ್ದ ಅನುದಾನಕ್ಕಿಂತಲೂ ದುಪ್ಪಟ್ಟು ಹಣವನ್ನು ಎನ್‌ಡಿಎ ಸರ್ಕಾರ ನೀಡುತ್ತಿದೆ ಎಂದು ತಿಳಿಸಿದರು.

ಶಾಸಕ ಡಾ.ಶಿವರಾಜ ಪಾಟೀಲ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ರಮಾನಂದ ಯಾದವ್‌, ಪರಿಶಿಷ್ಟ ಪಂಗಡ ರಾಜ್ಯ ಮೋರ್ಚಾ ಅಧ್ಯಕ್ಷ ತಿಪ್ಪರಾಜ ಹವಾಲ್ದಾರ್‌, ಮುಖಂಡರಾದ ಎನ್‌.ಶಂಕ್ರಪ್ಪ, ಬಿ.ಗೋವಿಂದ, ಕೆ.ಎಂ.ಪಾಟೀಲ, ವೈ.ಗೋಪಾಲರೆಡ್ಡಿ, ವಿಜಯರಾಜೇಶ್ವರಿ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.