ADVERTISEMENT

ಡಿಎನ್‌ಎ ಪರೀಕ್ಷೆ ಪ್ರಶ್ನಿಸಿದ್ದ ಅರ್ಜಿ ವಜಾ

​ಪ್ರಜಾವಾಣಿ ವಾರ್ತೆ
Published 5 ಜನವರಿ 2022, 3:08 IST
Last Updated 5 ಜನವರಿ 2022, 3:08 IST
   

ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣದಲ್ಲಿ ಮಗುವಿನ ಡಿಎನ್‌ಎ ಪರೀಕ್ಷೆಗಾಗಿ ಆರೋಪಿಯ ರಕ್ತದ ಮಾದರಿ ತೆಗೆದುಕೊಳ್ಳಲು ವಿಚಾರಣಾ ನ್ಯಾಯಾಲಯ ನೀಡಿದ್ದ ಆದೇಶ ಪ್ರಶ್ನಿಸಿದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

‘ಡಿಎನ್ಎ ಪರೀಕ್ಷೆಗೆ ನನ್ನಿಂದ ಬಲವಂತವಾಗಿ ರಕ್ತ ಪಡೆಯಲಾಗಿದೆ. ಇದು ಸಂವಿಧಾನ ವಿರೋಧಿ ನಡೆ’ ಎಂದು ಆಕ್ಷೇಪಿಸಿ ಅತ್ಯಾಚಾರ ಪ್ರಕರಣದ ಆರೋಪಿ ಮಾಳಪ್ಪ ಅಲಿಯಾಸ್ ಮಾಲಿಂಗರಾಯ ಸಲ್ಲಿಸಿದ್ದರಿಟ್‌ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಪಿ ಸಂದೇಶ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT