ಕವಿತಾಳ: ಪಾಮನಕಲ್ಲೂರು ಗ್ರಾಮದ ನಿವಾಸಿ ಪ್ರಸ್ತುತ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಕೇಂದ್ರೀಯ 7ನೇ ಘಟಕದಲ್ಲಿ ಹವಾ ನಿಯಂತ್ರಿತ ಬಸ್‌ನ ಚಾಲಕರಾಗಿ ಸೇವೆ ಸಲ್ಲಿಸುತ್ತಿರುವ ಯಲ್ಲಪ್ಪ ಸಾನಬಾಳ ಅವರು ಮುಖ್ಯಮಂತ್ರಿಗಳ ಸ್ವರ್ಣ ಪದಕ ಪಡೆದಿದ್ದಾರೆ.
7 ವರ್ಷಗಳ ಅವಧಿಯಲ್ಲಿ ಅಪಘಾತ ರಹಿತ ಮೋಟಾರು ವಾಹನ ಚಾಲನಾ ಸೇವೆಗಾಗಿ 2019ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕ ಲಭಿಸಿದ್ದು, ಬುಧವಾರ ಬೆಂಗಳೂರಿನಲ್ಲಿ ನಡೆದ ಚಾಲಕರ ದಿನದ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರು ಚಿನ್ನದ ಪದಕ ನೀಡಿ ಗೌರವಿಸಿದ್ದಾರೆ. ಅಪಘಾತ ರಹಿತ ವಾಹನ ಚಾಲನೆಗಾಗಿ ಈ ಹಿಂದೆ ಯಲ್ಲಪ್ಪ ಸಾನಬಾಳ ಅವರು ಬೆಳ್ಳಿ ಪದಕವನ್ನು ಪಡೆದಿದ್ದರು. 2007 ರಿಂದ ಅವರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.