ADVERTISEMENT

ಸಿಂಧನೂರು: ಮುಖ್ಯಮಂತ್ರಿಯಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2023, 9:06 IST
Last Updated 30 ಡಿಸೆಂಬರ್ 2023, 9:06 IST
<div class="paragraphs"><p>ಸಿಂಧನೂರಿನ ಸರ್ಕಾರಿ ಪದವಿ ಮಹಾವಿದ್ಯಾಲಯದ ಆವರಣದಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.  ಡಿ.ಕೆ.ಶಿವಕುಮಾರ, ಡಾ.ಶರಣಪ್ರಕಾಶ ಪಾಟೀಲ,  ಎನ್.ಎಸ್.ಬೋಸರಾಜು, ಶಿವರಾಜ ತಂಗಡಗಿ,  ಶಾಸಕ ಹಂಪನಗೌಡ ಬಾದರ್ಲಿ, ಬಸನಗೌಡ ದದ್ದಲ್‌,  ಬಸನಗೌಡ ತುರ್ವಿಹಾಳ ಉಪಸ್ಥಿತರಿದ್ದರು.</p></div>

ಸಿಂಧನೂರಿನ ಸರ್ಕಾರಿ ಪದವಿ ಮಹಾವಿದ್ಯಾಲಯದ ಆವರಣದಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಡಿ.ಕೆ.ಶಿವಕುಮಾರ, ಡಾ.ಶರಣಪ್ರಕಾಶ ಪಾಟೀಲ, ಎನ್.ಎಸ್.ಬೋಸರಾಜು, ಶಿವರಾಜ ತಂಗಡಗಿ, ಶಾಸಕ ಹಂಪನಗೌಡ ಬಾದರ್ಲಿ, ಬಸನಗೌಡ ದದ್ದಲ್‌, ಬಸನಗೌಡ ತುರ್ವಿಹಾಳ ಉಪಸ್ಥಿತರಿದ್ದರು.

   

ಸಿಂಧನೂರು (ರಾಯಚೂರು ಜಿಲ್ಲೆ): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಲ್ಲಿಯ ಸರ್ಕಾರಿ ಪದವಿ ಮಹಾವಿದ್ಯಾಲಯದ ಆವರಣದಲ್ಲಿ ಶನಿವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಕೆಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ತಿಮ್ಮಾಪೂರ ಏತ ನೀರಾವರಿ ಯೋಜನೆ, ಸರ್ಕಾರಿ ಪದವಿ ಮಹಾವಿದ್ಯಾಲಯದ ಸುವರ್ಣ ಮಹೋತ್ಸವ ಉದ್ಘಾಟಿಸಿದರು. ಜಲಜೀವನ್ ಮಿಷನ್ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು.

ADVERTISEMENT

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವ ಎನ್.ಎಸ್.ಬೋಸರಾಜು, ಶಾಸಕ ಹಂಪನಗೌಡ ಬಾದರ್ಲಿ, ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್‌, ಮಸ್ಕಿ ಶಾಸಕ ಬಸನಗೌಡ ತುರ್ವಿಹಾಳ, ಸಿರಗುಪ್ಪ ಶಾಸಕ ಬಿ.ಎಂ.ನಾಗರಾಜ, ಮಾನ್ವಿ ಶಾಸಕ ಅಂಬಯ್ಯ ನಾಯಕ, ಮಾಜಿ ಶಾಸಕ ಅಮರೇಗೌಡ ಭಯ್ಯಾಪುರ ಉಪಸ್ಥಿತರಿದ್ದರು.

ಹೆಚ್ಚುವರಿ ಜಿಲ್ಲಾಧಿಕಾರಿ ದುರುಗೇಶ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಿಖಿಲ್‌ ಬಿ., ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್‌ ಪಾಂಡ್ವೆ, ರಾಯಚೂರು ಉಪ ವಿಭಾಗಾಧಿಕಾರಿ ಮೆಹಬೂಬಿ, ಲಿಂಗಸುಗೂರು ಉಪ ವಿಭಾಧಿಕಾರಿ ಅವಿನಾಶ ಶಿಂದೆ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.