ADVERTISEMENT

ಮುಖ್ಯಮಂತ್ರಿ ಸಿದ್ಧರಾಮಯ್ಯರಿಂದ ನಾಳೆ ರಾಯಚೂರು ಜಿಲ್ಲೆ ಪ್ರವಾಸ

​ಪ್ರಜಾವಾಣಿ ವಾರ್ತೆ
Published 2 ಜನವರಿ 2026, 7:20 IST
Last Updated 2 ಜನವರಿ 2026, 7:20 IST
ಸಿದ್ಧರಾಮಯ್ಯ
ಸಿದ್ಧರಾಮಯ್ಯ   

ರಾಯಚೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಜ.3 ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ಅಂದು ಮಧ್ಯಾಹ್ನ 2 ಗಂಟೆಗೆ ಸಿಂಧನೂರಿನ ಸರ್ಕ್ಯೂಟ್ ಹೌಸ್ ಹತ್ತಿರದ ಹೆಲಿಪ್ಯಾಡ್‌ಗೆ ಆಗಮಿಸುವರು. 2ಗಂಟೆ ನಂತರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. 3 ಗಂಟೆಗೆ ಸಿಂಧನೂರು ಹೆಲಿಪ್ಯಾಡ್‌ನಿಂದ ನಿರ್ಗಮಿಸಿ, 3.30ಕ್ಕೆ ಸಿಂಧನೂರು ತಾಲ್ಲೂಕಿನ ಸೋಮಲಾಪುರ ಗ್ರಾಮದ ಶ್ರೀ ಅಂಬಾಮಠದ ಆವರಣದಲ್ಲಿನ ಹೆಲಿಪ್ಯಾಡ್‌ಗೆ ಆಗಮಿಸಿ ಅಂಬಾ ಮಹೋತ್ಸವ-2026ರ ಅಂಬಾದೇವಿ ಮಹಾರಥೋತ್ಸವ ಮತ್ತು ಜಂಬೂ ಸವಾರಿಗೆ ಚಾಲನೆ ನೀಡುವರು.

ಇದೇ ಅವಧಿಯಲ್ಲಿ ಸಿಂಧನೂರು ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಅವರ ವಿಶೇಷ ಕರ್ತವ್ಯಾಧಿಕಾರಿ ಕೆ.ಚಿರಂಜೀವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.