ADVERTISEMENT

ಬಾಲ ಕಾರ್ಮಿಕ ಪದ್ದತಿ ನಿರ್ಮೂಲನಾ ಅಭಿಯಾನ

​ಪ್ರಜಾವಾಣಿ ವಾರ್ತೆ
Published 6 ಜೂನ್ 2023, 15:30 IST
Last Updated 6 ಜೂನ್ 2023, 15:30 IST

ರಾಯಚೂರು: ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಬೀವೃದ್ಧಿ ಇಲಾಖೆ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕರವರ ಸಹಯೋಗದಲ್ಲಿ ದೇವದುರ್ಗದಲ್ಲಿ ಬಾಲ ಕಾರ್ಮಿಕ ಪದ್ದತಿ ನಿರ್ಮೂಲನಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ದೇವದುರ್ಗದ ಸರ್ಕಾರಿ ಬಾಲಕಿಯರ ಪ್ರೌಢ ಶಾಲೆಯ ಆವರಣದಲ್ಲಿ ಅಭಿಯಾನಕ್ಕೆ ಜಿಲ್ಲಾ ಬಾಲಕಾರ್ಮಿಕ ಯೋಜನೆಯ, ಯೋಜನಾ ನಿರ್ದೇಶಕÀ ಮಂಜುನಾಥ ರೆಡ್ಡಿ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಮಕ್ಕಳ ಹಕ್ಕುಗಳ ರಕ್ಷಣೆ ಎಲ್ಲರ ಜವಾಬ್ದಾರಿಯಾಗಿದೆ. ಮಕ್ಕಳು ಕಡ್ಡಾಯವಾಗಿ ಶಾಲೆಗೆ ಬರಬೇಕು, ಶಾಲೆಯಿಂದ ಹೊರಗಡೆ ಇರುವ ಮಕ್ಕಳನ್ನು ಶಾಲೆಗೆ ಕರೆತರುವಂತೆ ಹೇಳಿ ಯಾವುದೇ ಮಗು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ADVERTISEMENT

ಜಾಗೃತಿ ಜಾಥವು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಘೋಷಣೆ, ಕರಪತ್ರಗಳನ್ನು ಹಂಚುವುದರ ಮೂಲಕ ಜಾಗೃತಿ ಮೂಡಿಸಲಾಯಿತು.

ಬಿ.ಆರ್.ಸಿ ಕೋಆರ್ಡಿನೇಟರ್ ಶಿವರಾಜ ಪೂಜಾರಿ, ದೇವದುರ್ಗ ಕಾರ್ಮಿಕ ನಿರೀಕ್ಷಕ ಶಾಂತಮೂರ್ತಿ ಕವಡಿಮಠ, ಶಿಶು ಅಭಿವೃದ್ಧಿ ಯೋಜನೆಯ ಟಿ.ಪಿ.ಒ ಗಂಗಮ್ಮ, ಕಮಲಾಕ್ಷಿ, ತಿಕ್ಕಯ್ಯ, ಡಾನ್‌ಬೋಸ್ಕೊ ಸಂಸ್ಥೆಯ ಸಿದ್ದಲಿಂಗಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.