ADVERTISEMENT

ಮಸ್ಕಿ|ಬಾಲ್ಯ ವಿವಾಹಕ್ಕೆ ಯತ್ನ: ರಕ್ಷಣೆ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2023, 7:05 IST
Last Updated 6 ಫೆಬ್ರುವರಿ 2023, 7:05 IST

ಮಸ್ಕಿ: ಬಾಲ್ಯ ವಿವಾಹಕ್ಕೆ ಬಲಿಯಾಗುತ್ತಿದ್ದ ಇಬ್ಬರು ಬಾಲಕಿಯರನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ರಕ್ಷಿಸಿದ ಘಟನೆ ಶನಿವಾರ ರಾತ್ರಿ ನಡೆದಿದೆ.

ತಾಲ್ಲೂಕಿನ ಮ್ಯಾದ್ರಾಳ ಗೊಲ್ಲರಹಟ್ಟಿ ಗ್ರಾಮದಲ್ಲಿ ಬಾಲ್ಯ ವಿವಾಹ ನಡೆಯುತ್ತಿರುವ ಮಾಹಿತಿ ಮೇರೆಗೆ ದಾಳಿ ನಡೆಸಿದ ಶಿಶು ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಲಲಿತಾ ಚೆನ್ನದಾರ ಮತ್ತು ಸಿಬ್ಬಂದಿ ಇಬ್ಬರು ಬಾಲಕಿಯರನ್ನು ತಮ್ಮ ವಶಕ್ಕೆ ಪಡೆದರು.

‘ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ಹನುಮಂತಪ್ಪ ಸಲ್ಲರ್, ಲಕ್ಷ್ಮವ್ವ ಹನುಮಂತ, ತಿಮ್ಮಣ್ಣ ಗೊಲ್ಲರ, ಸಣ್ಣ ಹನುಮವ್ವ ಎಂಬುವರ ಮೇಲೆ ಪ್ರಕರಣ ದಾಖಲಾಗಿದೆ’ ಎಂದು ಪಿಎಸ್‌ಐ ಸಿದ್ದರಾಮ ಬಿದರಾಣಿ ತಿಳಿಸಿದ್ದಾರೆ.

ADVERTISEMENT

ಬಾಲಕಿಯರನ್ನು ರಾಯಚೂರಿನ ಬಾಲಮಂದಿರಕ್ಕೆ ಕಳಿಸಲಾಗಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.