ರಾಯಚೂರು:ವಿದ್ಯಾರ್ಥಿಯೊಬ್ಬನನ್ನು ಶಾಲಾ ವಾಹನದ ಫುಟ್‌ಬೋರ್ಡ್ ಮೇಲೆ ನಿಲ್ಲಿಸಿಕೊಂಡು ವಾಹನ ಚಲಾಯಿಸಿದ್ದನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರುಜಿಲ್ಲೆಯ ಮಾನ್ವಿ ಪಟ್ಟಣದ ಖಾಸಗಿ ಶಾಲಾ ವಾಹನ ಚಾಲಕನ ವಿರುದ್ಧ ಐಪಿಸಿ ಸೆಕ್ಷೆನ್ 279 ಹಾಗೂ 336 ಅಡಿ ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ.
ಈ ಸಂಬಂಧ ರಾಮಯ್ಯ ತಿಪ್ಪಯ್ಯ ಚಾಲಕನನ್ನು ಪೊಲೀಸರು ವಿಚಾರಣೆ ಒಳಪಡಿಸಿದ್ದಾರೆ. ಶಾಲಾ ವಿದ್ಯಾರ್ಥಿಯೊಬ್ಬನನ್ನು ಮಿನಿ ವಾಹನದ ಹೊರಗಡೆ ನಿಲ್ಲಿಸಿಕೊಂಡು ವಾಹನ ಓಡಿಸುತ್ತಿರುವುದನ್ನು ಗಮನಿಸಿದ್ದ ಸಾರ್ವಜನಿಕರೊಬ್ಬರುವಿಡಿಯೊ ಚಿತ್ರೀಕರಣ ಮಾಡಿ ಪೊಲೀಸರಿಗೆ ರವಾನಿಸಿದ್ದರು. ಇದೀಗ ವಿಡಿಯೊ ವೈರಲ್ ಆಗಿದೆ.
ಶಾಲಾ ವಾಹನಗಳು ಶಿಸ್ತು ಉಲ್ಲಂಘಿಸಿ ವಿದ್ಯಾರ್ಥಿಗಳ ಜೀವದ ಜೊತೆಗೆ ಚೆಲ್ಲಾಟವಾಡಬಾರದು. ಅಂಥ ಪ್ರಕರಣಗಳು ಕಂಡು ಬಂದಲ್ಲಿ ಶಿಸ್ತುಕ್ರಮ ಜರುಗಿಸುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.