
ಜೈಲು (ಪ್ರಾತಿನಿಧಿಕ ಚಿತ್ರ)
ಸಿಂಧನೂರು: ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಸಿಂಧನೂರಿನ ಮೂರನೇ ಅಧಿಕ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ.ಜಕಾತಿ ಅವರು ಆದೇಶ ನೀಡಿದ್ದಾರೆ.
ಆರೋಪಿ ಸಣ್ಣ ಪಾಮಪ್ಪ ಕೆಂಪ ನರಿಯಪ್ಪ ರತ್ನಾಪುರ ಈತನು 2020ರ ಜನವರಿಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದು, ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಸರ್ಕಲ್ ಇನ್‌ಸ್ಪೆಕ್ಟರ್ ಬಾಲಚಂದ್ರ ಲಕ್ಕಂ ಮತ್ತು ಡಿವೈಎಸ್‍ಪಿ ವಿಶ್ವನಾಥರಾವ್ ತನಿಖೆ ಮಾಡಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು. ಈ ಪ್ರಕರಣದ ಕುರಿತು ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶ ಬಿ.ಬಿ.ಜಕಾತಿ ಅವರು ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹1 ಲಕ್ಷ ದಂಡ ವಿಧಿಸಿದ್ದಾರೆ.
ಸರ್ಕಾರದ ಸಂತ್ರಸ್ತರ ಪರಿಹಾರ ನಿಧಿಯಿಂದ ₹10.50 ಲಕ್ಷ ಪರಿಹಾರ ನೀಡಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಸರ್ಕಾರದ ಪರವಾಗಿ ಮಂಜುನಾಥ ಬೇರಿಗಿ ವಾದ ಮಂಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.