ಕವಿತಾಳ (ರಾಯಚೂರು ಜಿಲ್ಲೆ): ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಡಿ ಅದೇ ಗ್ರಾಮದ ನಿವಾಸಿ, 65 ವರ್ಷದ ವೃದ್ಧನ ವಿರುದ್ಧ ಕವಿತಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವೃದ್ಧನ ಮೊಮ್ಮಗ ಮತ್ತು ಬಾಲಕಿ ಒಂದೇ ಶಾಲೆಯಲ್ಲಿ ಓದುತ್ತಿದ್ದರು. ಮೊಮ್ಮಗನ ಜತೆ ಬಾಲಕಿ ಮನೆಗೆ ಬಂದಿದ್ದಾಗ ವೃದ್ಧ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಬಾಲಕಿಯ ಪಾಲಕರು ದೂರು ನೀಡಿದ್ದಾರೆ.
ಬುಧವಾರ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿರುವ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.