ADVERTISEMENT

ದೌರ್ಜನ್ಯ ತಡೆಯಲು ಕಚೇರಿ ಸಹಕಾರಿ: ಡಾ.ಅಂತೋಣಿ

ಮಕ್ಕಳ ಹಕ್ಕುಗಳ ಆಯೋಗದ ಪ್ರಾದೇಶಿಕ ಕಚೇರಿ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2019, 16:12 IST
Last Updated 28 ನವೆಂಬರ್ 2019, 16:12 IST
ರಾಯಚೂರಿನ ಜಿಲ್ಲಾ ಪೊಲೀಸ್ ಇಲಾಖೆಯ ಸಮುದಾಯ ಭವನದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹುಕ್ಕುಗಳ ರಕ್ಷಣಾ ಆಯೋಗದ ಪ್ರಾದೇಶಿಕ ಕಚೇರಿಯನ್ನು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಡಾ.ಅಂತೋಣಿ ಸೆಬಾಸ್ಟಿಯನ್ ಗುರುವಾರ ಉದ್ಘಾಟಿಸಿದರು
ರಾಯಚೂರಿನ ಜಿಲ್ಲಾ ಪೊಲೀಸ್ ಇಲಾಖೆಯ ಸಮುದಾಯ ಭವನದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹುಕ್ಕುಗಳ ರಕ್ಷಣಾ ಆಯೋಗದ ಪ್ರಾದೇಶಿಕ ಕಚೇರಿಯನ್ನು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಡಾ.ಅಂತೋಣಿ ಸೆಬಾಸ್ಟಿಯನ್ ಗುರುವಾರ ಉದ್ಘಾಟಿಸಿದರು   

ರಾಯಚೂರು: ಸಾರ್ವಜನಿಕರ ಹಾಗೂ ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳನ್ನು ಶೀಘ್ರ ವಿಲೇವಾರಿ ಮಾಡಬೇಕು ಮತ್ತು ದೌರ್ಜನ್ಯ ತಡೆಯುವ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಆರು ಜಿಲ್ಲೆಗಳನ್ನೂಳಗೊಂಡ ಪ್ರಾದೇಶಿಕ ಕಚೇರಿಯನ್ನು ರಾಯಚೂರಿನಲ್ಲಿ ಆರಂಭಿಸಲಾಗುತ್ತಿದೆ. ದೂರುದಾರರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಡಾ.ಅಂತೋಣಿ ಸೆಬಾಸ್ಟಿಯನ್ ಹೇಳಿದರು.

ನಗರದ ಜಿಲ್ಲಾ ಪೊಲೀಸ್ ಇಲಾಖೆ ಸಮುದಾಯ ಭವನದಲ್ಲಿ ಗುರುವಾರ ಕರ್ನಾಟಕ ರಾಜ್ಯ ಮಕ್ಕಳ ಹುಕ್ಕುಗಳ ರಕ್ಷಣಾ ಆಯೋಗದ ಪ್ರಾದೇಶಿಕ ಕಚೇರಿ ಉದ್ಘಾಟಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಮಕ್ಕಳ ಸಾಗಾಣಿಕೆ, ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿ ಸೇರಿದಂತೆ ಇನ್ನಿತರ ಚಟುವಟಿಕೆಗಳಿಗೆ ಮಕ್ಕಳ ಬಳಕೆ ಆಗುವುದನ್ನು ತಡೆಯಬೇಕಾಗಿದೆ ಎಂದು ಹೇಳಿದರು.

ADVERTISEMENT

ಕಲ್ಯಾಣ ಕರ್ನಾಟಕ ಭಾಗದ ನಾಗರೀಕರು ತಮ್ಮ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಬೆಂಗಳೂರಿಗೆ ಬರಬೇಕಾಗಿತ್ತು. ಇದರಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸಿದ್ದರು. ಆದ್ದರಿಂದ ಜಿಲ್ಲೆಯಲ್ಲಿ ಪ್ರಾದೇಶಿಕ ಕಚೇರಿ ಪ್ರಾರಂಭಿಸುವುದರಿಂದ ಈ ಭಾಗದ ಜನರ ಪ್ರಕರಣಗಳನ್ನು ವಿಲೇವಾರಿ ಮಾಡಲು ಸಾಧ್ಯವಾಗಲಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ ವೇದಮೂರ್ತಿ ಮಾತನಾಡಿ, ಸಾರ್ವಜನಿಕರು ಈ ಪ್ರಾದೇಶಿಕ ಕಚೇರಿ ಉದ್ದೇಶ ಈಡೇರಿಸಲು ಸಹಕಾರಿ ಆಗಬೇಕು. ಮಕ್ಕಳ ಹಕ್ಕುಗಳನ್ನು ಎಲ್ಲರೂ ಸೇರಿ ರಕ್ಷಿಸೋಣ ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ದುರುಗೇಶ, ಆಯೋಗದ ಸದಸ್ಯರಾದ ಡಾ.ಜಯಶ್ರೀ ಚೆನ್ನಾಳ, ರಾಘವೇಂದ್ರ, ಪರಶುರಾಮ, ಅಶೋಕ, ಡಾ.ರಮೇಶ, ವೀರನಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.