ಸಿಂಧನೂರು: ಟಿಯುಸಿಐ ಸಂಯೋಜಿತ ಅಖಿಲ ಕರ್ನಾಟಕ ರಾಜ್ಯ ಸಮುದಾಯ ಆರೋಗ್ಯ ಎನ್‍ಎಚ್‍ಎಂ ಗುತ್ತಿಗೆ ನೌಕರರ ಸಂಘದ ನೇತೃತ್ವದಲ್ಲಿ ನಡೆದ ನಿರಂತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ ಗುತ್ತಿಗೆ ನೌಕರರಿಗೆ ಶೇ.5 ರಷ್ಟು ವೇತನ ಹೆಚ್ಚಿಸಿ ಘೋಷಣೆ ಮಾಡಿದೆ ಎಂದು ಟ್ರೇಡ್ ಯೂನಿಯನ್ ಸೆಂಟರ್ ಆಫ್ ಇಂಡಿಯಾದ ರಾಜ್ಯ ಘಟಕದ ಅಧ್ಯಕ್ಷ ಎಂ.ಡಿ.ಅಮೀರ್ ಅಲಿ ಹಾಗೂ ಉಪಾಧ್ಯಕ್ಷ ಎಂ.ಗಂಗಾಧರ ತಿಳಿಸಿದ್ದಾರೆ.
ಗುರುವಾರ ಹೇಳಿಕೆ ನೀಡಿರುವ ಅವರು, ಜುಲೈ 16ರಂದು ರಾಜ್ಯ ಸರ್ಕಾರವು 30 ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಸಮುದಾಯ ಆರೋಗ್ಯ ಅಧಿಕಾರಿಗಳಿಗೆ (ಸಿಎಚ್‍ಒ) ಶೇ.5 ರಷ್ಟು ವಾರ್ಷಿಕ ವೇತನ ಹೆಚ್ಚಳ ಮಾಡುವುದಾಗಿ ಘೋಷಿಸಿದ್ದು, ಇದು 6,200 ಉದ್ಯೋಗಿಗಳಿಗೆ ಪ್ರಯೋಜನವಾಗಲಿದೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.