ADVERTISEMENT

ಎಲ್ಲೆಡೆ ಸಡಗರ, ಕ್ರಿಸ್‌ಮಸ್‌ ಹಬ್ಬದ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2025, 5:48 IST
Last Updated 26 ಡಿಸೆಂಬರ್ 2025, 5:48 IST
ರಾಯಚೂರು ನಗರದ ಮೆಥೋಡಿಸ್ಟ್ ಚರ್ಚ್‌ನಲ್ಲಿ ಗುರುವಾರ ಕ್ರಿಸ್‌ಮಸ್‌ ಹಬ್ಬದ ಅಂಗವಾಗಿ ಕ್ರೈಸ್ತ ಧರ್ಮೀಯರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು
ರಾಯಚೂರು ನಗರದ ಮೆಥೋಡಿಸ್ಟ್ ಚರ್ಚ್‌ನಲ್ಲಿ ಗುರುವಾರ ಕ್ರಿಸ್‌ಮಸ್‌ ಹಬ್ಬದ ಅಂಗವಾಗಿ ಕ್ರೈಸ್ತ ಧರ್ಮೀಯರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು   

ರಾಯಚೂರು: ನಗರದ ಮೆಥೋಡಿಸ್ಟ್ ಚರ್ಚ್ ಸೇರಿದಂತೆ ಜಿಲ್ಲೆಯಲ್ಲಿರುವ ಎಲ್ಲಾ ಚರ್ಚ್‌ಗಳಲ್ಲಿ ಕ್ರೈಸ್ತ ಧರ್ಮೀಯರು ಕ್ರಿಸ್ಮಸ್ ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಿದರು.

ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ, ಧರ್ಮಗುರುಗಳಿಂದ ಹಬ್ಬದ ಸಂದೇಶ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ನಡೆದವು.

ಶಾಸಕ ಶಿವರಾಜ ಪಾಟೀಲ ಮತ್ತಿತರ ಗಣ್ಯರು ನಗರದ ಮೆಥೋಡಿಸ್ಟ್ ಚರ್ಚ್‌ನಲ್ಲಿ ಕ್ರಿಸ್ ಮಸ್ ಹಬ್ಬದ ಅಂಗವಾಗಿ ಕೇಕ್ ಕತ್ತರಿಸುವ ಮೂಲಕ ಕ್ರಿಸ್ಮಸ್ ಹಬ್ಬದ ಆಚರಣೆಯಲ್ಲಿ ಭಾಗವಹಿಸಿದ್ದರು.

ADVERTISEMENT

ಶಾಸಕ ಶಿವರಾಜ ಪಾಟೀಲ,‘ಅತ್ಯಂತ ಹಿಂದಿನಕಾಲದಿಂದಲೂ ರಾಯಚೂರು ನಗರದಲ್ಲಿ ವಾಸಿಸುತ್ತಿರುವ ಕ್ರೈಸ್ತ ಸಮುದಾಯ ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡುವ ಮೂಲಕ ಎಲ್ಲರ ಏಳಿಗೆಗೆ ಶ್ರಮಿಸುತ್ತಿರುವದು ಶ್ಲಾಘನೀಯ’ ಎಂದರು.

‘ಕ್ರೈಸ್ತ ಸಮುದಾಯ ಬಡವರಿಗೆ ಶಿಕ್ಷಣ, ಆರೋಗ್ಯ ಸೇವೆ ನೀಡುವ ಮೂಲಕ ಸಮಾಜದಲ್ಲಿ ಸೇವಾ ಮನೋಭಾವವುಳ್ಳ ಸಮುದಾಯವಾಗಿದೆ. ಸಮಾಜದ ಅಭಿವೃದ್ಧಿಗೆ ಇನ್ನೂ ಹೆಚ್ಚಿನ ಸಮಾಜಮುಖಿ ಕಾರ್ಯವನ್ನು ಮಾಡಲು ಎಲ್ಲಾ ರೀತಿಯ ಸಹಕಾರವನ್ನು ನೀಡುವೆ’ ಎಂದರು.

ಮುಖಂಡರಾದ ಕಡಗೋಲ ಆಂಜನೇಯ, ವೈ.ಗೋಪಾಲರೆಡ್ಡಿ, ಮಹಾನಗರ ಪಾಲಿಕೆ ಮಾಜಿ ಸದಸ್ಯೆ ಲಕ್ಷ್ಮೀ, ಸ್ಟೀವನ್ ಬಿನ್ನಿ ಸೇರಿದಂತೆ ಚರ್ಚ್‌ನ ಧರ್ಮಗುರುಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.

ಶಕ್ತಿ ನಗರ ವರದಿ: ತಾಲ್ಲೂಕಿನ ಶಕ್ತಿನಗರದಲ್ಲಿ ಕ್ರಿಸ್‌ಮಸ್ ಹಬ್ಬವನ್ನು ಸಡಗರ ಹಾಗೂ ಭಕ್ತಿಭಾವದಿಂದ ಆಚರಿಸಲಾಯಿತು. ಶಾಸಕ ಬಸನಗೌಡ ದದ್ದಲ ಮತ್ತಿತರ ಗಣ್ಯರು ವಿವಿಧ ಚರ್ಚ್‌ಗಳಿಗೆ ಭೇಟಿ ನೀಡಿ ಕ್ರಿಸ್‌ಮಸ್ ಶುಭಾಶಯಗಳನ್ನು ತಿಳಿಸಿದರು.

ಮೊದಲಿಗೆ ಕ್ಯಾಥೊಲಿಕ್ ಚರ್ಚ್‌ನಲ್ಲಿ ಧರ್ಮಗುರು ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.