ADVERTISEMENT

ರಾಯಚೂರು: ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ಮಾರಾಮಾರಿ

ವಿದ್ಯಾರ್ಥಿಗಳಿಂದ ಏರ್‌ಗನ್, ಬಟನ್‌ ಚಾಕು ಬಳಕೆ

​ಪ್ರಜಾವಾಣಿ ವಾರ್ತೆ
Published 1 ಜನವರಿ 2024, 16:12 IST
Last Updated 1 ಜನವರಿ 2024, 16:12 IST
ರಾಯಚೂರಿನ ಮದರ್ ಟ್ರಸ್ಟ್ ಶಾಲೆಯ ಆವರಣದಲ್ಲಿ ವಿದ್ಯಾರ್ಥಿಗಳು ಬಳಸಿದರೆನ್ನಲಾದ ಚಾಕು ಹಾಗೂ ಏರ್‌ಗನ್
ರಾಯಚೂರಿನ ಮದರ್ ಟ್ರಸ್ಟ್ ಶಾಲೆಯ ಆವರಣದಲ್ಲಿ ವಿದ್ಯಾರ್ಥಿಗಳು ಬಳಸಿದರೆನ್ನಲಾದ ಚಾಕು ಹಾಗೂ ಏರ್‌ಗನ್   

ರಾಯಚೂರು: ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳು ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಗಲಾಟೆ ಮಾಡಿಕೊಂಡ ಘಟನೆ ನಗರದ ಮದರ್ ಟ್ರಸ್ಟ್ ಶಾಲೆಯ ಆವರಣದಲ್ಲಿ ಸೋಮವಾರ ನಡೆದಿದೆ.

ಬೆಳಿಗ್ಗೆ ತಮ್ಮ ತರಗತಿಗಳಲ್ಲಿ ವರ್ಷಾಚರಣೆಗೆ ಕಾಂಪೌಂಡ್ ಪ್ರವೇಶಿಸುತ್ತಿರುವ ಸಂದರ್ಭದಲ್ಲಿ ಕ್ಷುಲ್ಲಕ ಕಾರಣಕ್ಕೆ 7ನೇ ಮತ್ತು 9ನೇ ತರಗತಿಗಳ ವಿದ್ಯಾರ್ಥಿಗಳು ಗಲಾಟೆ ಮಾಡಿಕೊಂಡಿದ್ದಾರೆ.

ಆವೇಶದಲ್ಲಿ ಒಬ್ಬ ವಿದ್ಯಾರ್ಥಿ ಹಕ್ಕಿಗಳಿಗೆ ಹೊಡೆಯುವ ಏರ್‌ಗನ್ ತಂದಿದ್ದರೆ, ಇನ್ನೊಬ್ಬ ವಿದ್ಯಾರ್ಥಿ ಎರಡು ಬಟನ್ ಚಾಕು, ಪಂಚ್ ತೆಗೆದುಕೊಂಡು ಬಂದಿದ್ದ. ಪರಸ್ಪರ ಹೊಡೆದಾಡಿಕೊಂಡ ಪರಿಣಾಮ 9ನೇ ತರಗತಿ ವಿದ್ಯಾರ್ಥಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪೊಲೀಸರು ವಿದ್ಯಾರ್ಥಿಗಳ ವಿಚಾರಣೆ ಮಾಡುತ್ತಿದ್ದಾರೆ.

ADVERTISEMENT

ವಿದ್ಯಾರ್ಥಿಗಳ ಗಲಾಟೆಗೆ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿಲ್ಲ. ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪಶ್ಚಿಮ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.