
ಪ್ರಜಾವಾಣಿ ವಾರ್ತೆ
ಸಾಂದರ್ಭಿಕ ಚಿತ್ರ
ರಾಯಚೂರು: 2024-25ನೇ ಸಾಲಿಗೆ ಪ್ರತಿಭಾವಂತ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳನ್ನು 6ನೇ ತರಗತಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ದಾಖಲು ಮಾಡಿಕೊಳ್ಳಲು ಜೂನ್ 2ರಂದು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಗರದ ಸ್ಟೇಷನ್ ರಸ್ತೆಯಲ್ಲಿರುವ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರವೇಶ ಪರೀಕ್ಷೆ ನಡೆಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.
ಮೇ 28ರಂದು ನಿಗದಿಪಡಿಸಲಾಗಿದ್ದ ಪ್ರವೇಶ ಪರೀಕ್ಷೆಯನ್ನು ಜೂನ್ 2ಕ್ಕೆ ಮುಂದೂಡಲಾಗಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಕಳುಹಿಸಲಾಗಿರುವ ಪ್ರವೇಶ ಪತ್ರಗಳು ತಲುಪದೇ ಇದ್ದಲ್ಲಿ ವಿದ್ಯಾರ್ಥಿಗಳು ಮೇಲ್ಕಂಡ ಸ್ಥಳದಲ್ಲಿ ಪ್ರವೇಶ ಪರೀಕ್ಷೆಗೆ ಸಮಯಕ್ಕೆ ಸರಿಯಾಗಿ ತಮ್ಮ ಅಗತ್ಯ ದಾಖಲಾತಿಗಳೊಂದಿಗೆ ಹಾಜರಾಗಬಹುದಾಗಿದೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.