ADVERTISEMENT

ಐತಿಹಾಸಿಕ ವೀರಾಗೋಟದಲ್ಲಿ ಸ್ವಚ್ಛತಾ ಕಾರ್ಯ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2024, 16:17 IST
Last Updated 11 ಫೆಬ್ರುವರಿ 2024, 16:17 IST
ರಾಯಚೂರು ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ದೇವದುರ್ಗ ತಾಲ್ಲೂಕಿನ  ವೀರಗೋಟ ವ್ಯಾಪ್ತಿಯ ಕೃಷ್ಣ ನದಿಯಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು
ರಾಯಚೂರು ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ದೇವದುರ್ಗ ತಾಲ್ಲೂಕಿನ  ವೀರಗೋಟ ವ್ಯಾಪ್ತಿಯ ಕೃಷ್ಣ ನದಿಯಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು   

ರಾಯಚೂರು: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಜಿಲ್ಲೆಯ ದೇವದುರ್ಗ ತಾಲ್ಲೂಕಿನ  ಐತಿಹಾಸಿಕ ಯಾತ್ರಾ ಸ್ಥಳ ವೀರಗೋಟ ವ್ಯಾಪ್ತಿಯ ಕೃಷ್ಣನದಿಯಲ್ಲಿ ಭಾನುವಾರ ಸ್ವಚ್ಛತಾ ಕಾರ್ಯ ನಡೆಯಿತು.

ಕೃಷ್ಣ ನದಿಯಲ್ಲಿ ಎಸೆಯಲಾಗಿದ್ದ ಗಂಟುಮೂಟೆ, ಪ್ಲಾಸ್ಟಿಕ್ ಚೀಲಗಳು, ತೆಂಗಿನಕಾಯಿ ಸೇರಿದಂತೆ ತ್ಯಾಜ್ಯವನ್ನು ತೆಗೆದು ಸ್ವಚ್ಛ ಮಾಡಲಾಯಿತು. 

ನದಿಯಲ್ಲಿ ತ್ಯಾಜ್ಯಗಳನ್ನು ಎಸೆಯುವುದರಿಂದ ಪರಿಸರ ಮಾಲಿನ್ಯದ ಜತೆಗೆ ಜನರಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಳ್ಳುತ್ತದೆ ಎಂದು ವಿದ್ಯಾರ್ಥಿಗಳು ವ್ಯಾಪಾರಿಗಳಿಗೆ ಹಾಗೂ ಯಾತ್ರಾರ್ಥಿಗಳಿಗೆ ತಿಳಿವಳಿಕೆ ಹೇಳಿದರು.

ADVERTISEMENT

ಎನ್ ಎಸ್ಎಸ್ ಅಧಿಕಾರಿ  ಸಂತೋಷಕುಮಾರ ರೇವೂರ್, ‌ಉಪನ್ಯಾಸಕ  ವೆಂಕಟೇಶ ರಾಠೋಡ, ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.