ADVERTISEMENT

ಚುನಾವಣೆ ಲಾಭಕ್ಕಾಗಿ ಬಿಜೆಪಿಯಿಂದ ಗಡಿ ತಂಟೆ: ಸಿ.ಎಂ.ಇಬ್ರಾಹಿಂ

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2022, 7:13 IST
Last Updated 28 ಡಿಸೆಂಬರ್ 2022, 7:13 IST
 ಸಿ.ಎಂ.ಇಬ್ರಾಹಿಂ
ಸಿ.ಎಂ.ಇಬ್ರಾಹಿಂ   

ರಾಯಚೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಬಿಜೆಪಿ ತನ್ನ ಲಾಭಕ್ಕಾಗಿ ಮಹಾರಾಷ್ಟ್ರ ಮತ್ತು ಕರ್ನಾಟಕ ಗಡಿತಂಟೆ ವಿಷಯ ಪ್ರಸ್ತಾಪಿಸುತ್ತಿವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಆರೋಪಿಸಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರೆದುರು ಹೇಳಿಕೊಳ್ಳಲು ಯಾವುದೇ ವಿಷಯಗಳಿಲ್ಲ. ಹೀಗಾಗಿ ಗಡಿ ವಿಚಾರಕ್ಕೆ ಕೈ ಹಾಕಿದ್ದಾರೆ ಎಂದರು.

ಜನಾರ್ದನರೆಡ್ಡಿ ಸ್ಥಾಪಿಸಿರುವ ಹೊಸ ಪಕ್ಷದಿಂದ ಜೆಡಿಎಸ್‌ಗೆ ಯಾವುದೇ ನಷ್ಟವಿಲ್ಲ. ಆದರೆ ಬಿಜೆಪಿಗೆ ಹಾನಿಯಾಗಲಿದೆ ಎಂದು ಹೇಳಿದರು.

ADVERTISEMENT

ಹೊಸ‌ ವರ್ಷಾಚರಣೆ ಸಂದರ್ಭದಲ್ಲಿ ಮದ್ಯಪ್ರಿಯರನ್ನು ಸಾಗಿಸಲು 108 ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಲಾಗುವುದು ಎಂದು ಆಡಳಿತ ನಡೆಸುವವರು ಹೇಳಿದ್ದಾರೆ. ಮದ್ಯಪ್ರಿಯರು ವಿಧಾನಸೌಧದಲ್ಲೇ ಇದ್ದಾರೆ. ಅವರನ್ನು ಮನೆಗೆ ತಲುಪಿಸಲು ಆ ಸೇವೆ ಬಳಸಿಕೊಳ್ಳಲಿ ಎಂದು ಲೇವಡಿ ಮಾಡಿದರು.

ಬಸವರಾಜ ಬೊಮ್ಮಾಯಿ ಅಧಿಕಾರವಿಲ್ಲದೆ ಆಡಳಿತ ನಡೆಸುತ್ತಿದ್ದಾರೆ ಎಂದು ಆರೋಪಿಸಿದ ಅವರು, ಆರ್‌ಎಸ್‌ಎಸ್ ಅಣತಿಯಂತೆ ಸಿಎಂ ನಡೆದುಕೊಳ್ಳುತ್ತಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.