
ಪ್ರಜಾವಾಣಿ ವಾರ್ತೆ
ದೇವದುರ್ಗ: ತಾಲ್ಲೂಕಿನ ತಿಂಥಣಿ ಬ್ರಿಜ್ ಕನಕ ಗುರುಪೀಠದ ಶಾಖಾ ಮಠಕ್ಕೆ ಫೆಬ್ರುವರಿ 1ರಂದು ಸಿಎಂ ಸಿದ್ದರಾಮಯ್ಯ ಭೇಟಿ ನೀಡುವರು ಎಂದು ಕುರುಬ ಸಮಾಜದ ತಾಲ್ಲೂಕು ಅಧ್ಯಕ್ಷ ನಾಗರಾಜ ಖಾನಾಪುರ ತಿಳಿಸಿದ್ದಾರೆ.
ಅಂದು ನಡೆಯುವ ಸಿದ್ದರಾಮನಂದಪುರಿ ಸ್ವಾಮೀಜಿ ಪುಣ್ಯರಾಧನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಶಿವಯೋಗಿ ಸ್ವಾಮೀಜಿ, ಕಾಗಿನೆಲೆ ಗುರುಪೀಠದ ಈಶ್ವರಾನಂದಪುರಿ ಸ್ವಾಮೀಜಿ ಸೇರಿದಂತೆ ರಾಜ್ಯದ ವಿವಿಧ ಮಠಗಳ 100ಕ್ಕೂ ಹೆಚ್ಚು ಮಠಾಧೀಶರು, ಹಾಲಿ ಮತ್ತು ಮಾಜಿ ಸಚಿವರು, ಶಾಸಕರು ಆಗಮಿಸುವರು ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.