ರಾಯಚೂರು: ಕಲ್ಲಿದ್ದಲು ಅಕ್ರಮ ಸಾಗಣೆಯಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಡಾ.ಬಿ.ಆರ್ ಅಂಬೇಡ್ಕರ್ ಸೇವಾ ಸಮಿತಿ ಒತ್ತಾಯಿಸಿದೆ.
ಈ ಕುರಿತು ಸಂಘದ ಪದಾಧಿಕಾರಿಗಳು ಬುಧವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿ, ಅಕ್ರಮ ಕಲ್ಲಿದ್ದಲು ಸಾಗಣೆಯಿಂದ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಕೊರತೆಯಾಗಿ ವಿದ್ಯುತ್ ಉತ್ಪಾದನೆ ಸ್ಥಗಿತವಾಗಿದೆ. ಒಂದು ಟಿಪ್ಪರ್ ಕಲ್ಲಿದ್ದಲಿನ ದರ ₹4ಲಕ್ಷವಿದೆ ಹೀಗಾಗಿ ಅಧಿಕಾರಗಳು ಗುತ್ತೇದಾರ ಜೊತೆ ಶಾಮೀಲಾಗಿ ಬೇರೆಡೆ ಮಾರಾಟ ಮಾಡುತ್ತಿದ್ದಾರೆ ಎಂದು ದೂರಿದೆ.
ರಾಯಚೂರಿನ ಆರ್ ಟಿಪಿಎಸ್ ಹಾಗೂ ವೈಟಿಪಿಎಸ್ ವಿದ್ಯುತ್ ಘಟಕದ ಮೂಲಕ ರಾಜ್ಯದ ಶೇ 50 ರಷ್ಟು ಭಾಗಕ್ಕೆ ವಿದ್ಯುತ್ ಸರಬರಾಜು ಮಾಡಲಾಗುತ್ತದೆ. ಕಲ್ಲಿದ್ದಲು ಕದ್ದು ಮಾರಾಟ ಮಾಡುವುದರಿಂದ ವಿದ್ಯುತ್ ಉತ್ಪಾದನೆ ಕೊರತೆಯಾಗಿ ರಾಜ್ಯದ ಜನರಿಗೆ ಸಮಸ್ಯೆಯಾಗುತ್ತದೆ ಕೂಡಲೇ ಜಿಲ್ಲಾಡಳಿತ ಇದನ್ನು ಗಂಭಿರವಾಗಿ ಪರಿಗಣಿಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಮುಖಂಡರಾದ ಎನ್.ಕೃಷ್ಣ, ರಂಗಪ್ಪ ಅಸ್ಕಿಹಾಳ, ಆನಂದ ಏಗನೂರು, ಗೋವಿಂದ ಮೇಸ್ತ್ರಿ ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.